ಬೆಂಗಳೂರು,ಜೂನ್,4,2021(www.justkannada.in): ಮೈಸೂರು ಡಿಸಿಯಾಗಿ ರೋಹಿಣಿ ಸಿಂಧೂರಿ ನೇಮಕ ಮತ್ತು ತಮ್ಮ ವರ್ಗಾವಣೆ ಪ್ರಶ್ನಿಸಿ ಹೈಕೋರ್ಟ್ ಗೆ ಬಿ.ಶರತ್ ಅರ್ಜಿ ಸಲ್ಲಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಟಿ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರದಿಂದಲೂ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.
ಸಿಎಟಿ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಹಿನ್ನೆಲೆ ಹೀಗಾಗಿ ವಿಚಾರಣೆ ಮುಂದೂಡಲು ಸರ್ಕಾರಿ ವಕೀಲರು ಹೈಕೋರ್ಟ್ ಬಳಿ ಮನವಿ ಮಾಡಿದರು. ಆದರೆ ಹೆಚ್ಚಿನ ಕಾಲಾವಕಾಶ ನೀಡಲು ಹೈಕೋರ್ಟ್ ನಿರಾಕರಿಸಿದೆ. ಜೂ.7 ಕ್ಕಿಂತ ಹೆಚ್ಚಿನ ಕಾಲಾವಕಾಶ ನೀಡಲು ಹೈಕೋರ್ಟ್ ನಿರಾಕರಿಸಿದ್ದು ವಿಚಾರಣೆಯನ್ನು ಜೂ.7 ಕ್ಕೆ ಮುಂದೂಡಿತು.
ಮೈಸೂರು ಡಿಸಿಯಾಗಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಟಿ ಆದೇಶ ರದ್ದುಪಡಿಸುವಂತೆ ಹಿಂದಿನ ಡಿಸಿ ಬಿ.ಶರತ್ ಅವರು ಅರ್ಜಿ ಸಲ್ಲಿಸಿದ್ದರು. ಜತೆಗೆ ರೋಹಿಣಿ ಸಿಂಧೂರಿ ನೇಮಕ ರದ್ದು ಮಾಡುವಂತೆಯೂ ಮನವಿ ಸಲ್ಲಿಸಿದ್ದರು . ಈ ಸಂಬಂಧ ವರ್ಗಾವಣೆಗೆ ಮಂಡಳಿ ರಚಿಸಲು ಹೈಕೋರ್ಟ್ ಆದೇಶಿಸಿತ್ತು. ಇದೀಗ ಇದನ್ನು ರಾಜ್ಯ ಸರ್ಕಾರ ಹೈಕೋರ್ಟ್ ನಲ್ಲಿ ಪ್ರಶ್ನಿಸಿದೆ.
Key words: Rohini Sindhuri- appointed -Mysore DC-CAT -order-high court-Government