ಬೆಂಗಳೂರು, ಜು.12,2019(www.justkannada.in): ವಿಧಾನಮಂಡಲ ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಮಾಡುವುದಾಗಿ ನಿರ್ಧರಿಸಿದ ಹಿನ್ನೆಲೆ ಬಿಜೆಪಿಗೆ ಟೆನ್ಷನ್ ಶುರುವಾಗಿದೆ. ಈ ನಡುವೆ ಬೆಂಗಳೂರು ಬಿಟ್ಟು ತೆರಳದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಮ್ಮ ಶಾಸಕರಿಗೆ ಸೂಚನೆ ನೀಡಿದ್ದಾರೆ.
ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿ.ಎಸ್ ಯಡಿಯೂರಪ್ಪ ತಮ್ಮ ಶಾಸಕರಿಗೆ ಸೋಮವಾರದವರೆಗೂ ಬೆಂಗಳೂರು ಬಿಟ್ಟು ತೆರಳದಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಶ್ವಾಸಮತಯಾಚನೆ ನಿರ್ಧಾರ ಬೆನ್ನಲ್ಲೆ ಬಿಎಸ್ ವೈ ಅವರು ಕಚೇರಿಯಲ್ಲಿ ಬಿಜೆಪಿ ಶಾಸಕರೊಂದಿಗೆ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದರು. ಬಿಜೆಪಿಯ ಎಲ್ಲ ಶಾಸಕರು ಬೆಂಗಳೂರಿನಲ್ಲಿರುವಂತೆ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ ಜೆಡಿಎಸ್ ನಾಲ್ಕು ಬಿಜೆಪಿ ಶಾಸಕರನ್ನ ಸಂಪರ್ಕಿಸಿದೆ ಎಂಬ ಸುದ್ದಿ ಹರಡಿದ್ದು, ಅಪರೇಷನ್ ತೆನೆಯ ಟೆನ್ಷನ್ ಬಿಜೆಪಿ ನಾಯಕರಿಗೆ ಶುರುವಾಗಿದೆ.
Key words: BJP-BS Yeddyurappa- instructs –MLA-not – leave -Bangalore