ಬೆಂಗಳೂರು,ಜೂನ್,14,2021(www.justkannada.in): ಪ್ರಥಮ ಪಿಯು ವಿದ್ಯಾರ್ಥಿಗಳ ಮೌಲ್ಯಾಂಕನ ಅವಧಿಯನ್ನ ವಿಸ್ತರಣೆ ಮಾಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ಸುರೇಶ್ ಕುಮಾರ್, ಹಲವು ಉಪನ್ಯಾಸಕ ಸಂಘಟನೆಗಳ ಕೋರಿಕೆಯ ಮೇರೆಗೆ ಪ್ರಥಪಿ.ಯು.ಸಿ. ಮೌಲ್ಯಾಂಕನ ಪ್ರಕ್ರಿಯೆಯನ್ನು ಎಲ್ಲ ಜಿಲ್ಲೆಗಳ ಲಾಕ್-ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಸಮಯ ವಿಸ್ತರಿಸಿ ಆದೇಶವನ್ನು ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಹಾಗೆಯೇ ಎಸ್ ಎಸ್ ಎಲ್ ಸಿ ಪರೀಕ್ಷೆಯ ನಿರ್ವಹಣೆ ಕುರಿತಂತೆ ಜೂನ್ 28 ರಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳ ಜತೆ ಸಭೆ ನಡೆಯಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಾಲಾರಂಭ ಕುರಿತು ಈಗಾಗಲೇ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಲಾಗಿದೆ. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು, ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಿರುವುದರಿಂದ ಶಿಕ್ಷಕರು ಲಾಕ್ ಡೌನ್ ತೆರವಾದ ದಿನದಿಂದಲೇ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಲು ಅವಕಾಶ ನೀಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
Key words: Extending -validation – first PU –students-minister -suresh kumar