ನವದೆಹಲಿ,ಜೂನ್,20,2021(www.justkannada.in): ಕೊರೊನಾದಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ನೀಡಲು ಆಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಅಫಿಡೆವಿಟ್ ಸಲ್ಲಿಕೆ ಮಾಡಿದೆ.
ಕೊರೊನಾದಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ 4 ಲಕ್ಷ ರೂ. ಪರಿಹಾರ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಸಂಬಂಧ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದು, ಸಂತ್ರಸ್ತರ ಸಂಬಂಧಿಕರಿಗೆ 4 ಲಕ್ಷ ರೂ. ಪಾವತಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಎದುರಿಸಲು, ಅಗತ್ಯವಿರುವ ವ್ಯಕ್ತಿಗಳಿಗೆ ಕೇಂದ್ರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳು ಭಾರಿ ಮೊತ್ತವನ್ನು ಖರ್ಚು ಮಾಡಿವೆ ಮತ್ತು ಅವರ ಹಣಕಾಸು ಮಿತಿಮೀರಿದೆ. ಈಗಾಗಲೇ ಅಗತ್ಯವಿರುವವರಿಗೆ ನೆರವು ನೀಡಲಾಗಿದೆ ಎಂದು ಕೇಂದ್ರ ವು ತನ್ನ ಅಫಿಡವಿಟ್ ನಲ್ಲಿ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
Key words: corona- died- family – compensated- Affidavit – Center – Supreme court