ಬೆಂಗಳೂರು, ಜೂನ್ 25,2021(www.justkannada.in): ಕರ್ನಾಟಕದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ ಆವರಣದಲ್ಲಿ ಜಗಜ್ಯೋತಿ ಬಸವಣ್ಙನ ಪ್ರತಿಮೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಪುತ್ಥಳಿ ನಿರ್ಮಾಣ ಮಾಡಲು ಕಡತವನ್ನು ಮಂಡನೆ ಮಾಡಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ. ಬಸವಣ್ಣನ ಪುತ್ಹಳಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕನ್ನಡ ಸಂಸ್ಕೃತಿ ಇಲಾಖೆಗೆ ಸಿಎಂ ಬಿಎಸ್ ವೈ ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.
12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಸಮಾನತೆಯ ಹರಿಕಾರ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಯನ್ನು ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದ ಆವರಣದಲ್ಲಿ ನಿರ್ಮಿಸುವುದರಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುಖುಟಪ್ರಾಯವಾಗುತ್ತದೆ.
ಆದ್ದರಿಂದ ವಿಧಾನಸೌಧದ ಆವರಣದಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಯನ್ನು ಸ್ಥಾಪಿಸಲು ಸೂಕ್ತ ಪ್ರಸ್ತಾವನೆಯೊಂದಿಗೆ ಕಡತವನ್ನು ಮಂಡಿಸುವಂತೆ ಸಿಎಂ ಬಿಎಸ್ ವೈ ಸೂಚಿಸಿದ್ದಾರೆ.
Key words: state Government – constructing -statue -Basavanna -vidhansudha