ಮುಂಬೈ,ಜೂನ್,28,2021(www.justkannada.in): ಭಾರತದಲ್ಲಿ ಕೋವಿಡ್ 2ನೇ ಅಲೆ ತಗ್ಗಿದ್ದು 3ನೇ ಅಲೆಯ ಭೀತಿ ಎದುರಾಗಿದೆ. ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಭಾರತದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಅನ್ನ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಗೆ ಸ್ಥಳಾಂತರ ಮಾಡಲಾಗಿದೆ.
ಈ ಬಗ್ಗೆ ಬಿಸಿಸಿಐ ಘೋಷಣೆ ಮಾಡಿದೆ. ಈ ಕುರಿತು ಮಾಹಿತಿ ನೀಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಟಿ-20 ವಿಶ್ವಕಪ್ ಅನ್ನು ಯುಎಇಗೆ ಸ್ಥಳಾಂತರಿಸುತ್ತಿದ್ದೇವೆ. ಯುಎಇಗೆ ಸ್ಥಳಾಂತರ ಬಗ್ಗೆ ಐಸಿಸಿಗೆ ಮಾಹಿತಿ ನೀಡುತ್ತೇವೆ. ಟಿ-20 ವಿಶ್ವಕಪ್ ವೇಳಾಪಟ್ಟಿ ಐಸಿಸಿ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಭಾರತ ಈ ವರ್ಷ ಟಿ-20 ವಿಶ್ವಕಪ್ ಗೆ ಆತಿಥ್ಯ ವಹಿಸಬೇಕಿತ್ತು ಆದರೆ ದೇಶದಲ್ಲಿ ಕೊರೋನಾ ಸೋಂಕು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಭಾರತ ವಿಶ್ವಕಪ್ ಆಯೋಜಿಸುವ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಹೀಗಾಗಿ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿದೆ. ಇನ್ನು ಕೊರೋನಾ ಹೆಚ್ಚಳದಿಂದಾಗಿ ಐಪಿಎಲ್ ಅರ್ಧಕ್ಕೆ ನಿಂತಿದ್ದು ಉಳಿದ ಪಂದ್ಯಗಳನ್ನ ಯುಎಇಗೆ ಸ್ಥಳಾಂತರ ಮಾಡಿದೆ.
Key words: T-20 World Cup – Displacement – UAE- BCCI- announcement