ಬೆಂಗಳೂರು,ಜು,14,2019(www.justkannada.in): ರಾಜ್ಯ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅತೃಪ್ತ ಶಾಸಕ ಎಂ.ಟಿ ಬಿ ನಾಗರಾಜ್ ಮುಂಬೈಗೆ ತೆರಳಿದ ಬಳಿಕ ಫುಲ್ ಟೆನ್ಷನ್ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಈ ನಡುವೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಹೆಚ್. ಡಿ ದೇವೇಗೌಡರ ನಿವಾಸಕ್ಕೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಮೂರು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಈ ವೇಳೆ ಅತೃಪ್ತ ಶಾಸಕರನ್ನ ಮನವೊಲಿಸುವ ಪ್ರಯತ್ನ ವಿಫಲವಾಗುತ್ತಿದೆ. ಸುಪ್ರೀಂಕೋರ್ಟ್ ತೀರ್ಪು ಏನೆಂದು ಬರುತ್ತೆ ಕಾದು ನೋಡೋಣ. ಸ್ಪೀಕರ್ ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ನೋಡೋಣ ಎಂಬುದಾಗಿ ಚರ್ಚೆಸಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ನಿಂದಲೇ ಹೆಚ್ಚಿನ ಶಾಸಕರು ಮುಂಬೈಗೆ ತೆರಳಿದ್ದಾರೆ. ಜೆಡಿಎಸ್ ನಿಂದ ಮೂವರು ಮಾತ್ರ ತೆರಳಿರುವುದು ಹೀಗಾಗಿ ಸರ್ಕಾರ ಉಳಿಸಿಕೊಳ್ಳುವ ಜವಾಬ್ದಾರಿ ಕಾಂಗ್ರೆಸ್ ಬಿಟ್ಟು ಬಿಡೋಣ ಎಂದು ಹೆಚ್.ಡಿ ದೇವೇಗೌಡರು ಮತ್ತು ಸಿಎಂ ಹೆಚ್.ಡಿಕೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಹೆಚ್.ಡಿ ದೇವೇಗೌಡರ ನಿವಾಸದಿಂದ ಸಿಎಂ ಹೆಚ್,ಡಿ ಕುಮಾರಸ್ವಾಮಿ ಕೆಕೆ. ಗೇಸ್ಟ್ ಹೌಸ್ ಗೆ ತೆರಳಿದ್ದು ಅಲ್ಲಿ ಕಾಂಗ್ರೆಸ್ ನಾಯಕರ ಜತೆ ಮಾತುಕತೆ ನಡೆಸುವ ಸಾಧ್ಯತೆ ಇದೆ.
Key words: CM HD Kumaraswamy- discussing -former Prime Minister -HD Deve Gowdaran.