ಬೆಂಗಳೂರು,ಜುಲೈ,16,2021(www.justkannada.in): ವಿಶ್ವವಿಖ್ಯಾತ ನಂದಿಬೆಟ್ಟ ಗಿರಿಧಾಮಕ್ಕೆ ರೋಪ್ ವೇ ನಿರ್ಮಾಣ ಮಾಡಲು ಇದೇ ಜುಲೈ 23ಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಅವರು ಸ್ಥಳ ಪರಿಶೀಲನೆ ಮಾಡಲಿದ್ದಾರೆ.
ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ.ಯೋಗೇಶ್ವರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ಕುಮಾರ ಕೃಪ ಅತಿಥಿ ಗೃಹದಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ, ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕಿ ಸಿಂಧೂ ರೂಪೇಶ್, ಅರಣ್ಯ ಮತ್ತು ವಸತಿ ವಿಹಾರಧಾಮ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್, ಕೆ.ಎಸ್.ಟಿ.ಡಿ.ಸಿ. ವ್ಯವಸ್ಥಾಪಕ ನಿರ್ದೇಶಕ ವಿಜಯ್ ಶರ್ಮ ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ನಂದಿ ಗಿರಿಧಾಮ ರೋಪ್ ವೇ ಯೋಜನೆಗೆ ತ್ವರಿತವಾಗಿ ಚಾಲನೆ ನೀಡಬೇಕು. ಜುಲೈ 23ರಂದು ಸ್ಥಳ ಪರಿಶೀಲನೆ ಮಾಡಿ ಅತೀ ಶೀಘ್ರದಲ್ಲಿ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಸಚಿವ ಯೋಗೇಶ್ವರ್ ಅವರು ಅಧಿಕಾರಿಗಳಿಗೆ ಹೇಳಿದರು. AARCON INFRA ಸಂಸ್ಥೆಯವರು ನಂದಿ ಬೆಟ್ಟದ ರೋಪ್ ವೇ ಯೋಜನೆಯ ಪ್ರಾತ್ಯಕ್ಷಿತೆ ಪ್ರದರ್ಶಿಸಿದರು.
ರೋಪ್ ವೇ ನಿರ್ಮಾಣದಲ್ಲಿ ಈ ಸಂಸ್ಥೆಗೆ 51 ವರ್ಷಗಳ ಅನುಭವವಿದ್ದು, ದೇಶ ವಿದೇಶ ಹಾಗೂ ನಮ್ಮ ರಾಷ್ಟ್ರದ ವಿವಿಧ ರಾಜ್ಯಗಳಲ್ಲಿ 64 ರೋಪ್ ವೇ ಗಳನ್ನು ನಿರ್ಮಾಣ ಮಾಡಿದ್ದಾರೆ.
ರಾಜ್ಯದ ಪ್ರಪ್ರಥಮ ರೋಪ್ ವೇ ಯನ್ನು ಪ್ರವಾಸಿಗರಿಗೆ ಒದಗಿಸಲು ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಯೋಗೇಶ್ವರ್ ಸಭೆಯಲ್ಲಿ ಸೂಚಿಸಿದರು.
ಶ್ರವಣಬೆಳಗೊಳದಲ್ಲಿ ಜೈನ ಪ್ರವಾಸಿ ಸರ್ಕೀಟ್ ನಿರ್ಮಾಣ…
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಒರಿಸ್ಸಾದಲ್ಲಿ ಕೋನಾರ್ಕ್ ಸೂರ್ಯ ದೇವಾಲಯದ ಇತಿಹಾಸ ಹೇಳುವ ಒಂದು ವಿನೂತನ ಪರಿಕಲ್ಪನೆಯನ್ನು ಪ್ರವಾಸಿಗರಿಗೆ ಒದಗಿಸಿದ್ದಾರೆ. ಪ್ರವಾಸಿಗರು ಸೂರ್ಯ ದೇವಾಲಯವನ್ನು ದರ್ಶನ ಮಾಡುವುದಕ್ಕೆ ಮುಂಚೆ ಅಲ್ಲಿ ನಿರ್ಮಾಣ ಮಾಡಿರುವ ಥಿಯೇಟರ್ ನಲ್ಲಿ ಸೂರ್ಯ ದೇವಾಲಯದ ಇತಿಹಾಸವನ್ನು ಚಲನಚಿತ್ರದ ಮೂಲಕ ತೋರಿಸಲಾಗುತ್ತದೆ. ನಂತರ, ಸೂರ್ಯ ದೇವಾಲಯ ದರ್ಶನ ಮಾಡಲಾಗುತ್ತದೆ.
ಜೈನ ಕಾಶಿ ಶ್ರವಣಬೆಳಗೊಳದಲ್ಲಿ ಇದೇ ಮಾದರಿಯಲ್ಲಿ ಬಾಹುಬಲಿಯ ಇತಿಹಾಸವನ್ನು ಹೇಳುವ ಒಂದು ಡಾಕ್ಯುಮೆಂಟರಿಯನ್ನು ನಿರ್ಮಾಣ ಮಾಡಿ ಅದನ್ನು ಥಿಯೇಟರ್‌ನಲ್ಲಿ ಪ್ರದರ್ಶಿಸಲಾಗುವುದು. ನಂತರ ಪ್ರವಾಸಿಗರು ಗೋಮಟೇಶ್ವರ ವೀಕ್ಷಣೆ ಮಾಡಲು ವ್ಯವಸ್ಥೆ ಕಲ್ಪಿಸಲಾಗುವುದು. ಈ ಮೂಲಕ ಪ್ರವಾಸಿಗರಿಗೆ ಬಾಹುಬಲಿಯ ಸಂಪೂರ್ಣ ಇತಿಹಾಸದ ಮಾಹಿತಿಯನ್ನು ನೀಡಲಾಗುವುದು.
ಮೈಸೂರು ವಸ್ತು ಪ್ರದರ್ಶನ ಕೇಂದ್ರದಲ್ಲಿ ಹೈಟೆಕ್ ಹಾಥ್ ವೇ ನಿರ್ಮಾಣ
ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಮೂಲಕ ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ವಸ್ತು ಪ್ರದರ್ಶನ ಮೈದಾನದಲ್ಲಿ ಅತ್ಯಾಧುನಿಕವಾದ ಕಲೆ, ಸಂಸ್ಕೃತಿ, ಜಾನಪದ ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಹಾಥ್ವೇ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಯೋಗೆಶ್ವರ್ ಅಧಿಕಾರಿಗಳಿಗೆ ಸೂಚಿಸಿದರು.
ಮೂರು ಹಂತಗಳಲ್ಲಿ ಈ ಬೃಹತ್ ಹಾಥ್ವೇ ಯೋಜನೆಯನ್ನು ಅನುಷ್ಠಾನಗೊಳಿಸಬೇಕು. ಅತೀ ಶೀಘ್ರದಲ್ಲಿ ಈ ವಿಷಯವನ್ನು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು ಕಾಮಗಾರಿಗೆ ಚಾಲನೆ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಂದಾಜು ರೂ.100.00ಕೋಟಿ ವೆಚ್ಚದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ.
ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿಪಡಿಸಲು ಬಂಡವಾಳ ಆರ್ಕಷಿಸುವ ಸಂಬಂಧ THE INDIA EXPO-2023 ಬೃಹತ್ ಮೇಳವನ್ನು ಆಯೋಜಿಸಲು ಕಾರ್ಯೋನ್ಮಖರಾಗುವಂತೆ ಸಚಿವ ಯೋಗೇಶ್ವರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರ ವಿಸ್ತರಣೆಗೆ ವಿಫುಲ ಅವಕಾಶಗಳಿವೆ. ಹೀಗಾಗಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚು ಉತ್ತೇಜನ ನೀಡಿ ದೇಶ ವಿದೇಶಗಳ ಪ್ರವಾಸಿಗರು ಆಗಮಿಸುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಅಂತರರಾಷ್ಟ್ರೀಯ ಪ್ರವಾಸಿ ಮೇಳವನ್ನು ಏರ್ಪಡಿಸುವ ಮೂಲಕ ಬಂಡವಾಳವನ್ನು ಆಕರ್ಷಿಸಬೇಕು ಎಂದರು. ಇದೇ ವೇಳೆ ONE IRIS ಕಂಪನಿಯವರು ಪ್ರವಾಸೋದ್ಯಮ ಮೇಳದ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಿದರು.
ENGLISH SUMMARY…
Rope way to Nandi hills: Spot inspection on July 23
Bengaluru, July 16, 2021 (www.justkannada.in): Tourism Minister C.P. Yogeshwar will undertake spot inspection to undertake the construction works of providing rope way to the historic Nandi hills, on July 23.
A meeting was held at the Kumara Krupa guest house in Bengaluru, under the leadership of Tourism, Environment and Biology Minister C.P. Yogeshwar.
Tourism Department Secretary Pankaj Kumar Pandey, Director Sindhu Roopesh, Jungle Lodges and Resorts Company Managing Director Kumar Pushkar, KSTDC Managing Director Vijay Sharma and other senior officials participated in the meeting.
On the occasion, the Minister informed that the process of constructing the rope way to the historic Nandi hills which is pending from a long time should be expedited. He informed that a spot inspection should be done on July 23 and tenders should be invited and works should be started soon. Aarcon Infra company presented a demonstration of the rope way.
The company has 51 years of experience in construction of rope ways and it has constructed 64 rope ways both in the country and other countries.
Keywords: Tourism Minister/ C.P. Yogeshwar/ Nandi hills/ rope way/ July 23/ spot inspection
Key words: Rope Way – Nandi Hill-Location -Inspection -July 23rd.