ಬೆಂಗಳೂರು,ಜುಲೈ,19,2021(www.justkannada.in): 2022-23ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ವಿಭಾಗದಲ್ಲಿ ಎಂಜಿನಿಯರಿಂಗ್ ಸೇರಿ ಎಲ್ಲ ವೃತ್ತಿಪರ ಕೋರ್ಸುಗಳನ್ನು ಕನ್ನಡದಲ್ಲಿ ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಈ ನಿಟ್ಟಿನಲ್ಲಿ ಎಂಜಿನಿಯರಿಂಗ್ ಕೋರ್ಸುಗಳ ಪಠ್ಯವನ್ನು ಕನ್ನಡಕ್ಕೆ ಭಾಷಾಂತರಿಸುವ ಕೆಲಸ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯನ್ ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ಮಾತೃಭಾಷೆಗೆ, ಅಂದರೆ ನಮ್ಮ ಕನ್ನಡಕ್ಕೆ ಇನ್ನೂ ಹೆಚ್ಚಿನ ಶಕ್ತಿ ಬರುತ್ತದೆ. ಅದರ ಬಗ್ಗೆ ಯಾವ ಗೊಂದಲ, ಅನುಮಾನವೂ ಬೇಡ ಎಂದು ಇದೇ ಸಂದರ್ಭದಲ್ಲಿ ಅವರು ಒತ್ತಿ ಹೇಳಿದರು.
ಕರ್ನಾಟಕ ವಿಶ್ವವಿದ್ಯಾಲಯದ ಎಲ್ಲಾ ಭಾಷೆಗಳ ಅಧ್ಯಾಪಕರ ಸಂಘದವರ ವತಿಯಿಂದ ಆಯೋಜಿಸಲಾಗಿದ್ದ ʼಹೊಸ ಶಿಕ್ಷಣ ನೀತಿ; ಭಾರತೀಯ ಭಾಷೆಗಳ ಅಧ್ಯಯನʼ ವಿಷಯದ ಕುರಿತ ವೆಬಿನಾರ್ ನಲ್ಲಿ ಭಾಗವಹಿಸಿ ಡಿಸಿಎಂ ಅಶ್ವಥ್ ನಾರಾಯಣ್, ಮಾತನಾಡಿದರು.
ವೃತ್ತಿಪರ ಶಿಕ್ಷಣವನ್ನು ಮಾತೃಭಾಷೆಯಲ್ಲಿ ನೀಡಬೇಕು ಎಂಬ ಅಂಶವೂ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿದೆ. ಹೊಸ ನೀತಿಯ ಪ್ರಮುಖ ಆಶಯವೂ ಇದಾಗಿದೆ. ಈ ನಿಟ್ಟಿನಲ್ಲಿ ಸರಕಾರ ಕನ್ನಡದಲ್ಲಿಯೇ ವೃತ್ತಿಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಅಗತ್ಯ ಪ್ರೋತ್ಸಾಹ ನೀಡಲಿದೆ. ತಾಂತ್ರಿಕ ಶಿಕ್ಷಣ ವ್ಯವಸ್ಥೆಯಲ್ಲಿ ಕನ್ನಡವನ್ನು ಹೆಚ್ಚೆಚ್ಚು ಅಳವಡಿಸಲಾಗುವುದು ಎಂದು ಅವರು ತಿಳಿಸಿದರು.
ಈ ಕಲಿಕೆಯ ಪರಿಕಲ್ಪನೆ ಅದೆಷ್ಟು ಚೆನ್ನಾಗಿದೆ ಎಂದರೆ, ಹೊಸ ತಂತ್ರಜ್ಞಾನವನ್ನು ತಮ್ಮ ಭಾಷೆಯ ಆಧಾರದ ಮೇಲೆಯೇ ರೂಪಿಸಬಹುದು. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲೂ ಕನ್ನಡವನ್ನು ಬಳಸಬಹುದು. ತಂತ್ರಜ್ಞಾನ ಮತ್ತು ಆವಿಷ್ಕಾರ ಬೆಳೆದಂತೆಲ್ಲ ಅದಕ್ಕೆ ಸಮಾನಾಂತರವಾಗಿ ಕನ್ನಡವೂ ಬೆಳೆಯಬೇಕು. ಮಾತೃಭಾಷೆಯ ಅಸ್ತಿತ್ವ ಎಲ್ಲ ಕಡೆಯೂ ಇರಬೇಕು ಎಂಬುದು ಸರಕಾರದ ಉದ್ದೇಶವಾಗಿದೆ ಎಂದು ಡಾ.ಅಶ್ವತ್ಥನಾರಾಯಣ್ ಹೇಳಿದರು.
ಶಿಕ್ಷಣ ನೀತಿಯ ಪ್ರಕಾರ ಮಕ್ಕಳು ಎರಡು ದೇಶಿಯ ಭಾಷೆಗಳನ್ನು ಹಾಗೂ ಒಂದು ಅಂತಾರಾಷ್ಟ್ರೀಯ ಭಾಷೆಯನ್ನು ಕಡ್ಡಾಯವಾಗಿ ಕಲಿಯಲೇಬೇಕು. ಅದರಲ್ಲಿ ಮಾತೃಭಾಷೆಗೆ ಮೊದಲ ಪ್ರಾಶಸ್ತ್ಯ ಇರುತ್ತದೆ. ಮೊದಲು ನಮ್ಮ ಭಾಷೆ, ನಂತರ ಅನ್ಯಭಾಷೆ. ಈ ಬಗ್ಗೆ ಯಾವುದೇ ಗೊಂದಲ ಬೇಡ. ಅಲ್ಲದೆ, ಯಾವುದೇ ಕೋರ್ಸುಗಳನ್ನು ಯಾರೋ ರೂಪಿಸಿ ನಮ್ಮ ಮೇಲೆ ಹೇರುತ್ತಾರೆಂಬ ಅನುಮಾನ ಬೇಡ. ಎಲ್ಲವನ್ನೂ ರೂಪಿಸುವುದು ಆಯಾ ವಿಶ್ವವಿದ್ಯಾಲಯಗಳು ಮತ್ತು ಆಯಾ ವಿಷಯಗಳಲ್ಲಿ ತಜ್ಞರಾಗಿರುವ ನಮ್ಮವರೇ ಪ್ರಾಧ್ಯಾಪಕರು ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದರು.
ಮುಂದಿನ ದಿನಗಳಲ್ಲಿ ಪ್ರತಿಯೊಂದು ಶಿಕ್ಷಣ ಸಂಸ್ಥೆಗೂ ಸ್ವಾಯತ್ತತೆ ಕೊಟ್ಟು ಸಬಲೀಕರಣ ಮಾಡಲಾಗುವುದು. ಆಡಳಿತಾತ್ಮಕ, ಶೈಕ್ಷಣಿಕ, ಆರ್ಥಿಕ ನಿರ್ಧಾರಗಳನ್ನು ಕೈಗೊಳ್ಳುವ ಎಲ್ಲ ಅಧಿಕಾರಗಳನ್ನು ಕೂಡ ಶಿಕ್ಷಣ ಸಂಸ್ಥೆಗಳಿಗೆ ಕೊಡಲಾಗುವುದು. ಈ ಮೂಲಕ ಶಿಕ್ಷಣ ಸಾಂಸ್ಥಿಕ ನೆಲೆಗಟ್ಟಿನಲ್ಲಿ ಸ್ಥಿರವಾಗಿ ಬೆಳವಣಿಗೆ ಹೊಂದಲಿದೆ ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹೇಳಿದರು.
ಉನ್ನತ ಶಿಕ್ಷಣ ಮಂಡಳಿಯ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡರು, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಸಮಿತಿ ಸದಸ್ಯರಾಗಿದ್ದ ಪ್ರೊ.ಟಿ.ವಿ.ಕಟ್ಟಿಮನಿ ಮುಂತಾದವರು ಈ ವೆಬಿನಾರ್ ನಲ್ಲಿ ಭಾಗಿಯಾಗಿದ್ದರು.
ENGLISH SUMMARY…..
Learning of technical courses in Kannada will be approved from 2022-23: DCM Ashwathnarayana
Bengaluru, July 19, 2021 (www.justkannada.in): Deputy Chief Minister and High Education Minister Dr. C.N. Ashwathnarayan informed that the students can learn technical courses including Engineering courses in Kannada from the year 2022-23. The process of translating Engineering courses into Kannada is going on.
“Teaching in native languages has gained significance following implementation of the new National Education Policy, which will provide more strength to Kannada,” he said.
He participated in a webinar on the topic, “New Education Policy: A study of Indian Languages,” organized by the all languages lecturers association of the Universities in Karnataka. In his address, he said, “The new National Education policy stresses on the need of providing technical education in the native language. Hence, the State Government will encourage the teaching of technical courses in Kannada. Kannada languages will be included in technical teaching from now onwards.”
“The teaching concept under the NEP is so nice. New technology can be developed based on our native language. We can use Kannada in the information technology sector too. Kannada language should also develop along with the development of technology and discoveries. It is the objective of the State Government to make the native language present everywhere,” he added.
Prof. Timmegowda, Vice-President, Higher Education Board, Prof. S.G. Siddaramaiah, former President, Kannada Book Authority, Prof. T.V. Kattimani, member of National Education Policy Draft Committee, and others participated in the webinar.
Keywords: Webinar/ New National Education Policy/ Karnataka/ DCM/ Dr. C.N. Ashwathnarayana/ technical courses/ teaching in Kannada/ language
Key words: Opportunity – learning –vocational- education – Kannada – 2022-23- DCM -Ashwath Narayan.