ಬೆಳಗಾವಿ,ಜುಲೈ,25,2021(www.justkannada.in): ಸಿಎಂ ಬದಲಾವಣೆ ಸಂಬಂಧಿಸಿದಂತೆ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಬದ್ಧ. ನಾನು ಸಂತೃಪ್ತಿ ಸಮಾಧಾನದಿಂದ ಇದ್ದೇನೆ ಎಂದು ಹೇಳಿದ್ದಾರೆ.
ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ಸಭೆ ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಬದ್ಧ. ಪಕ್ಷದಲ್ಲಿ ನನಗೆ ಯಾವುದೇ ಕೊರತೆ ಇಲ್ಲ. ನಾವು ಎಲ್ಲರೂ ಪಕ್ಷದಲ್ಲಿ ಒಗ್ಗಟ್ಟಾಗಿದ್ದೇವೆ. ನೂರು ಮಂದಿ ಸಿದ್ದರಾಮಯ್ಯ ಬಂದರೂ ನಾವು ಪಕ್ಷವನ್ನ ಮತ್ತೆ ಅಧಿಕಾರಕ್ಕೆ ತರುತ್ತೇವೆ. ನಾಯಕ ಸಿಟಿ ರವಿ ಹೇಳಿದ ಮಾತು ನೂರಕ್ಕೆ ನೂರರಷ್ಟು ಸತ್ಯ ನಾನು ಹೈಕಮಾಂಡ್ ಹಾಕಿದ ಗೆರೆ ದಾಟಲ್ಲ ಎಂದರು.
ಬೆಳಗಾವಿ ಜಿಲ್ಲೆಯ 7 ತಾಲ್ಲೂಕುಗಳ 113 ಗ್ರಾಮಗಳಲ್ಲಿ ಪ್ರವಾಹ ಉಂಟಾಗಿದೆ. ಜಿಲ್ಲೆಯಲ್ಲಿ 89 ಕಾಳಜಿ ಕೇಂದ್ರ ಸ್ಥಾಪನೆ ಮಾಡಲಾಗಿದೆ. ಕೃಷ್ಣಾ ನದಿ ಪಾತ್ರದ ಎಲ್ಲಾ ಜಲಾಶಯ ಭರ್ತಿಯಾಗಿವೆ. ಜಿಲ್ಲೆಯಲ್ಲಿ ವಿಪತ್ತು ನಿರ್ವಹಣಾ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಪ್ರವಾಹ ಪರಿಹಾರ ಕಾರ್ಯಗಳಿಗೆ ಹಣಕಾಸಿನ ತೊಂದರೆ ಇಲ್ಲ. ಮತ್ತಷ್ಟು ಹಣ ಬಿಡುಗಡೆ ಮಾಡುತ್ತೇವೆ. ನಾಳೆ ಮಧ್ಯಾಹ್ನದ ನಂತರ ಉತ್ತರ ಕನ್ನಡ ಜಿಲ್ಲೆಗೆ ತೆರಳುತ್ತೇನೆ ಎಂದು ಬಿಎಸ್ ವೈ ತಿಳಿಸಿದರು.
Key words: High Command-Decision- CM -BS Yeddyurappa-belgavi