ಬೆಂಗಳೂರು,ಜುಲೈ,27,2021(www.justkannada.in): ನಮಗೆ ಮಂತ್ರಿ ಸ್ಥಾನ ಬಿಟ್ಟು ಪಕ್ಷ ಸಂಘಟನೆ ಮಾಡಿ ಅಂದರೂ ನಾವು ಮಾಡುತ್ತೇವೆ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ.
ನೂತನ ಸಿಎಂ ಆಯ್ಕೆ ಸಂಬಂಧ ಇಂದು ಸಂಜೆ 7 ಗಂಟೆಗೆ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಯಲಿದ್ದು ಅಂತಿಮವಾಗಿ ಇಂದೇ ನೂತನ ಸಿಎಂ ಘೋಷಣೆಯಾಗುವ ಸಾಧ್ಯತೆ ಇದೆ. ಈಗಾಗಲೇ ಕೇಂದ್ರದ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಬಂದಿದ್ದಾರೆ.
ಇನ್ನು ನೂತನ ಸಿಎಂ ಮತ್ತು ಸಚಿವ ಸ್ಥಾನ ಕೈತಪ್ಪುವ ಆತಂಕ ಬಗ್ಗೆ ಪ್ರತಿಕ್ರಿಯಿಸಿರುವ ಕೆ.ಎಸ್ ಈಶ್ವರಪ್ಪ, ಮಂತ್ರಿ ಸ್ಥಾನ ಬಿಟ್ಟು ಪಕ್ಷ ಸಂಘಟನೆ ಮಾಡಿ ಅಂದ್ರೆ ಮಾಡ್ತೇವೆ. ಪಕ್ಷ ಸಂಘಟನೆಯಿಂದಲೇ ನಾವು ಈ ಮಟ್ಟಕ್ಕೆ ಬಂದಿದ್ದೇವೆ. ಪಕ್ಷ ಕೊಡುವ ಕೆಲಸಕ್ಕೆ ನಾವು ಬದ್ಧರಾಗಿರುತ್ತೇವೆ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ. ಎಂದರು.
ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಮುರುಗೇಶ್ ನಿರಾಣಿ, ಸಿಎಂ ಅಲ್ಲ ಸಚಿವ ಸ್ಥಾನ ಕೊಡದಿದ್ರೂ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
Key words: ministerial -post – party- organize -KS Eshwarappa.