ಮಂಡ್ಯ,ಆಗಸ್ಟ್,3,2021(www.justkannada.in): ಅಕ್ರಮ ಗಣಿಗಾರಿಕೆ ತಡೆಯಲು ಮುಂದಾಗಿರುವ ಮಂಡ್ಯ ಜಿಲ್ಲಾಡಳಿತ ಲೈಸೆನ್ಸ್ ಪಡೆಯದ, ಲೈಸೆನ್ಸ್ ನವೀಕರಿಸದ 11 ಕಲ್ಲುಗಣಿಗಳ ಗುತ್ತಿಗೆಯನ್ನ ರದ್ಧು ಮಾಡಿದೆ.
ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಮಂಡ್ಯ ಇವರ ಅಧ್ಯಕ್ಷತೆಯಲ್ಲಿ ಜುಲೈ 28 ರಂದು ನಡೆದ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ(ಗಣಿ) ಸಭೆಯಲ್ಲಿ ಅವಧಿ ವಿಸ್ತರಿಸಿ ನೀಡಿದ ಕಲ್ಲು ಗಣಿಗುತ್ತಿಗೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಪ್ರಾಧಿಕಾರದಿಂದ ಇದುವರೆಗೂ ಪರಿಸರ ವಿಮೋಚನಾ ಪತ್ರವನ್ನು ಪಡೆದು ಕಛೇರಿಗೆ ಹಾಜರುಪಡಿಸದೆ ಇರುವ 11 ಕಲ್ಲುಗಣಿಗುತ್ತಿಗೆಗಳನ್ನು ರದ್ದುಪಡಿಸಲು ನಿರ್ಣಯಿಸಲಾಗಿರುತ್ತದೆ. ಅದರಂತೆ ಮಂಡ್ಯ ಜಿಲ್ಲೆಯಾದ್ಯಂತ ಪರಿಸರ ವಿಮೋಚನಾ ಪತ್ರ ಪಡೆಯದೆ ಇದ್ದ 11 ಕಲ್ಲು ಗಣಿ ಗುತ್ತಿಗೆಗಳನ್ನು ಜುಲೈ 31 ರಿಂದ ಜಾರಿಗೆ ಬರುವಂತೆ ರದ್ದುಪಡಿಸಲಾಗಿದೆ. ಎ ಫಾರಂ ಹೊಂದದ 22 ಕಲ್ಲುಕ್ವಾರಿಗಳ ಪರವಾನಗಿಯನ್ನ ರದ್ಧು ಮಾಡಲಾಗಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ, ಶ್ರೀರಂಗಪಟ್ಟಣ ಮತ್ತು ನಾಗಮಂಗಲ ತಾಲ್ಲೂಕುಗಳಲ್ಲಿ ಅನಧಿಕೃತ ಕಲ್ಲುಗಣಿಗಾರಿಕೆ, ಸಾಗಾಣಿಕೆ ನಿಯಂತ್ರಣ ಸಂಬಂಧ ಜಿಲ್ಲಾ ಟಾಸ್ಕ್ ಫೋರ್ಸ್ ವತಿಯಿಂದ ತಾಲ್ಲೂಕುವಾರು ಕಂದಾಯ ಇಲಾಖೆ, ಅರಣ್ಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳನ್ನು ಒಳಗೊಂಡಂತೆ ಚಾಲಿತ ದಳವನ್ನು ರಚಿಸಲಾಗಿದೆ.
ಹಾಗೆಯೇ ಮಂಡ್ಯ ಜಿಲ್ಲೆಯಾದ್ಯಂತ ಅನಧಿಕೃತ ಕಲ್ಲುಗಣಿಗಾರಿಕೆ/ಸಾಗಾಣಿಕೆ ನಿಯಂತ್ರಣ ಸಂಬಂಧ ಜಿಲ್ಲಾ ಟಾಸ್ಕ್ ಫೋರ್ಸ್ ವತಿಯಿಂದ ಕಂದಾಯ ಇಲಾಖೆ, ಅರಣ್ಯ ಇಲಾಖೆ, ಪಂಚಾಯತ್‌ರಾಜ್ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳನ್ನು ಒಳಗೊಂಡಂತೆ 11 ಚೆಕ್ ಫೋಸ್ಟ್ ಗಳನ್ನು ಸ್ಥಾಪಿಸಲಾಗಿದೆ.
Key words: Mandya District – Prevent -Illegal Mining- License -Cancellation