ಬೆಂಗಳೂರು,ಆಗಸ್ಟ್,10.2021(www.justkannada.in): ಸರ್ಕಾರದ ಸಭೆ -ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿ, ಶಾಲು, ಪೇಟ, ನೆನಪಿನ ಕಾಣಿಕೆ ನೀಡುವುದನ್ನ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರ ನಿರ್ದೇಶನದಂತೆ, ಇನ್ನು ಮುಂದೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ – ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು. ಈ ಸಂಬಂಧ ರಾಜ್ಯದ ಮುಖ್ಯಕಾರ್ಯದರ್ಶಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ಕನ್ನಡ ಪುಸ್ತಕ ನೀಡಲು ಅನುಮತಿಸಲಾಗಿದೆ.
ಈ ನಿರ್ದೇಶನವನ್ನು ಚಾಚು ತಪ್ಪದೇ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಸರ್ಕಾರದ ಎಲ್ಲಾ ಇಲಾಖೆಗಳ ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೊಳಪಡುವ ಎಲ್ಲಾ ಸಂಸ್ಥೆಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಅಧಿಕಾರಿಗಳಿಗೆ ಸೂಚಿಸುವಂತೆ ತಿಳಿಸಿದ್ದಾರೆ.
Key words: state government -banned –shalu-peta- gift -government programs.