ಮೈಸೂರು, ಆ.14, 2021 : (www.justkannada.in news) ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಮೈಸೂರಿನಲ್ಲಿ ಇಂದು ಬೃಹತ್ ಲೋಕ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಲೋಕ್ ಅದಾಲತ್ ಗೆ ಮೈಸೂರು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಎಂ.ಎಲ್.ರಘುನಾಥ್ ಚಾಲನೆ ನೀಡಿದರು. ಬಳಿಕ ಮಾತಮಾಡಿದ ಅವರು, ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ ಮಾಡಲು ಕ್ರಮ. ಯಾವುದೇ ಕೋರ್ಟ್ ಗೆ ಫೀಸ್ ಪಡೆಯದೇ ಪ್ರಕರಣಗಳ ಇತ್ಯರ್ಥ. ಉಭಯ ಕಕ್ಷಿದಾರರು ನೇರವಾಗಿ ಭಾಗವಹಿಸಲು ಅವಕಾಶ. ಪ್ರಕರಣಗಳು ರಾಜಿಯಾದಲ್ಲಿ ಶೇಕಡ 100 ರಷ್ಟು ಶುಲ್ಕ ಹಿಂದಿರುಗಿಸಲಾಗುತ್ತದೆ. ಸಾರ್ವಜನಿಕರು ಲೋಕ್ ಅದಾಲತ್ ನ ಅನುಕೂಲ ಪಡೆದುಕೊಳ್ಳಿ ಎಂದು ಮನವಿ ಮಾಡಿದರು.
ಈ ಕಾರ್ಯಕ್ರಮದಲ್ಲಿ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾದೀಶೆ ಎಲ್.ಸರಸ್ವತಿ ವಿ ಕೊಸಂದರ್, ಕೌಂಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಪಾಟೀಲ್ ನಾಗಲಿಂಗನಗೌಡ, ಜಿಲ್ಲಾ ನ್ಯಾಯಾಧೀಶರಾದ ಪಿ.ಶ್ರೀನಿವಾಸ, ಹಿರಿಯ ಸಿವಿಲ್ ನ್ಯಾಯದೀಶರಾದ ದೇವರಾಜ ಭೂತೆ ಹಾಗೂ ಮೈಸೂರು ಜಿಲ್ಲಾ ವಕೀಲ ಸಂಘದ ಅಧ್ಯಕ್ಷ ಆನಂದ್ ಸೇರಿ ಹಲವರು ಉಪಸ್ಥಿತರಿದ್ದರು.
key words : mysore-court-bruhath-lokaadalath-judges