ಬೆಂಗಳೂರು,ಆಗಸ್ಟ್,18,2021(www.justkannada.in): ಮಗನ ಸಾವಿನ ಸುದ್ದಿ ಕೇಳಿ ಆಘಾತಗೊಂಡಿದ ತಾಯಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಇಂದು ನಡೆದಿದೆ.
ಬೆಂಗಳೂರಿನ ವಿಜಯನಗರದಲ್ಲಿ ಈ ಘಟನೆ ನಡೆದಿದೆ. ತಾಯಿ ಲೀಲಾವತಿ ಎಂಬುವವರೇ ಅಪಘಾತದಲ್ಲಿ ಮೃತಪಟ್ಟವರು.
ಸ್ನೇಹಿತರ ಜತೆ ಜಗಳವಾಡಿಕೊಂಡ ಮಗ ಮನೆಯಲ್ಲಿ ನೇಣು ಬಿಗಿದುಕೊಂಡು ಅಸ್ವಸ್ಥಗೊಂಡಿದ್ದ. ಈ ಮಧ್ಯೆ ಮಗನನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಗ ಮೃತಪಟ್ಟಿದ್ದನು. ಈ ಸುದ್ದಿ ಕೇಳಿ ಆಘಾತದಲ್ಲಿದ್ದ ತಾಯಿ, ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಅಪಘಾತವಾಗಿ ಮೃತಪಟ್ಟಿದ್ದಾರೆ.
ಆತ್ಮಹತ್ಯೆ ಪ್ರಕರಣ ಸದ್ಯ ವಿಜಯನಗರ ಠಾಣೆಯಲ್ಲಿ ದಾಖಲಾಗಿದ್ದು, ಲೀಲಾವತಿ ಸಾವು ಪ್ರಕರಣ ವಿಜಯನಗರ ಸಂಚಾರಿ ಠಾಣೆಯಲ್ಲಿ ದಾಖಲಾಗಿದೆ.
Key words: Accident – mother – shock- – news -son’s- death.