ಬೆಂಗಳೂರು, ಆಗಸ್ಟ್ 19, 2021 (www.justkannada.in): ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಎಂಗೇಜ್ಮೆಂಟ್ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು.
ಈ ಕುರಿತು ಕತ್ರಿನಾ ಸ್ಪಷ್ಟನೆ ನೀಡಿದ್ದಾರೆ. ಎಂಗೇಜ್ ಮೆಂಟ್ ಸುದ್ದಿಯಲ್ಲಿ ಹುರುಳಿಲ್ಲ ಎಂದು ಕತ್ರಿನಾ ತಂಡ ಸ್ಪಷ್ಟಪಡಿಸಿದೆ.
ವಿಕ್ಕಿ ಹಾಗೂ ಕತ್ರಿನಾ ಸೈಲೆಂಟ್ ಆಗಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿಯನ್ನು ಕೆಲವು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು.
ಈ ಹಿಂದೆಯೂ ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಒಟ್ಟಾಗಿ ಸಾಕಷ್ಟು ಬಾರಿ ಕಾಣಿಸಿಕೊಂಡಿದ್ದರು. ಆದರೆ, ಮದುವೆ, ಎಂಗೇಜ್’ಮೆಂಟ್ ಸುದ್ದಿಗಳನ್ನು ಇಬ್ಬರೂ ಅಲ್ಲಗಳೆದಿದ್ದರು.