ಬೆಂಗಳೂರು,ಆಗಸ್ಟ್,19,2021(www.justkannada.in): ಸಾಕ್ಷ್ಯ ನಾಶ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಜಿ.ಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂ ಕೋರ್ಟ್ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಇನ್ನು ಇಂದು ಸಾಕ್ಷ್ಯ ನಾಶ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದೆ.
ಆಗಸ್ಟ್ 11ರಂದು ಸುಪ್ರೀಂ ಕೋರ್ಟ್ ಮಾಜಿ ಸಚಿವ ವಿನಯ್ ಕುಲಕರ್ಣಿ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಸಂಬಂಧ, ಜಾಮೀನು ಅರ್ಜಿ ನೀಡಲಾಗಿದ್ದು, ಧಾರವಾಡಕ್ಕೆ ತೆರಳದಂತೆ ಷರತ್ತು ವಿಧಿಸಲಾಗಿದೆ. ಆದರೆ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಸಾಕ್ಷ್ಯ ನಾಶ ಪ್ರಕರಣ ಸಂಬಂಧ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ಬಾಕಿ ಇತ್ತು.
ಇಂದು ಈ ಸಂಬಂಧ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
Key words: Former minister- Vinay Kulkarni -granted –bail-court