ಆ.23 ರಿಂದ ಶಾಲಾ-ಕಾಲೇಜು ಆರಂಭ ಹಿನ್ನೆಲೆ:  ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ.

ಬೆಂಗಳೂರು,ಆಗಸ್ಟ್,21,2021(www.justkannada.in): ಆಗಸ್ಟ್ 23ರಿಂದ  ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣ ಮಾಡಲು ಬಿಎಂಟಿಸಿ ಅವಕಾಶ ಮಾಡಿಕೊಟ್ಟಿದೆ.

ಆಗಸ್ಟ್ 23 ರಿಂದ 9 ರಿಂದ 12ನೇ ತರಗತಿ ಶಾಲಾ-ಕಾಲೇಜುಗಳು ಆರಂಭಗೊಳ್ಳುತ್ತಿವೆ. ಹೀಗಾಗಿ ವಿದ್ಯಾರ್ಥಿಗಳು ಹಳೆಯ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ, ಬಿಎಂಟಿಸಿ ಬಸ್ ಗಳಲ್ಲಿ ತೆರಳುವುದಕ್ಕೆ ಬೆಂಗಳೂರು ಬಿಎಂಟಿಸಿ ಅನುಮತಿ ನೀಡಿದೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ  ಬಿಎಂಟಿಸಿ, ರಾಜ್ಯ ಸರ್ಕಾರದ ನಿರ್ದೇಶನದಂತೆ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು 9 ರಿಂದ 12ನೇ ತರಗತಿಗಳು ದಿನಾಂಕ 23-08-2021ರಿಂದ ಪ್ರಾರಂಭಿಸಲಾಗುತ್ತಿದೆ.

ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಗುಣವಾಗುವಂತೆ 9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳು 2020-21ನೇ ಸಾಲಿನಲ್ಲಿ ವಿತರಣೆ ಮಾಡಿರುವ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸು ಅಥವಾ ಪ್ರಸಕ್ತ ಸಾಲಿನಲ್ಲಿ ಶಾಲಾ, ಕಾಲೇಜಿಗೆ ದಾಖಲಾಗಿರುವ ಶುಲ್ಕ ರಸೀದಿ ಅಥವಾ ಶಾಲಾ, ಕಾಲೇಜಿನ ಗುರುತಿನ ಚೀಟಿಯೊಂದಿಗೆ ದಿನಾಂಕ 23-08-2021ರಿಂದ ಮುಂದಿನ ಆದೇಶದವರೆಗೂ ಸಂಸ್ಥೆಯ ಸಾಮಾನ್ಯ ಸಾರಿಗೆಗಳಲ್ಲಿ ವಿದ್ಯಾರ್ಥಿಗಳ ವಾಸಸ್ಥಳದಿಂದ ಶಾಲಾ, ಕಾಲೇಜುಗಳವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂಬುದಾಗಿ ತಿಳಿಸಿದೆ.

ENGLISH SUMMARY…

Schools and Colleges to begin from Aug. 23: BMTC announces free service for students
Bengaluru, Aug. 21, 2021 (www.justkannada.in): Schools and Colleges in the State are ready to function from August 23, 2021, i.e., from Monday. In the meantime the Bengaluru Metropolitan Transport Corporation (BMTC) has announced to provide free service for the students.
Schools and Colleges from 9th standard to 12 standards will start from August 23. The BMTC has allowed the students to travel by showing their old smart cards, student bus passes in BMTC buses, said a press release issued by BMTC.
Keywords: Schools/ Colleges/ commence/ August 23/ BMTC/ free service/ students

Key words: school-college -start – BMTC – free- travel -students.