ಬೆಂಗಳೂರು, ಜುಲೈ 20, 2019 (www.justkannada.in): ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಗೀತಾ, ಇನ್ನೂ ಚಿತ್ರೀಕರಣ ಹಂತದಲ್ಲಿರುವಂತೆಯೇ ದಾಖಲೆ ನಿರ್ಮಾಣ ಮಾಡಿದೆ.
ಚಿತ್ರ ಬಿಡುಗಡೆಗೂ ಮುನ್ನವೇ ಚಿತ್ರದ ಡಿಜಿಟಲ್ ಹಕ್ಕು ಬೇಡಿಕೆ ಸೃಷ್ಟಿಸಿಕೊಂಡಿದ್ದು, ಚಿತ್ರದ ಡಿಜಿಟಲ್ ಹಕ್ಕನ್ನು ಅಮೇಜಾನ್ ಪ್ರೈಮ್ ಸಂಸ್ಥೆ ಭಾರಿ ಮೊತ್ತ ನೀಡಿ ತನ್ನ ತೆಕ್ಕೆಗೆ ಹಾಕಿಕೊಂಡಿದೆ.
ಮೂಲಗಳ ಪ್ರಕಾರ ಸುಮಾರು 2.75 ಕೋಟಿ ರೂ ಗಳಿಗೆ ಅಮೇಜಾನ್ ಪ್ರೈಮ್ ಸಂಸ್ಥೆ ಗೀತಾ ಚಿತ್ರದ ಡಿಜಿಟಲ್ ಹಕ್ಕು ಖರೀದಿ ಮಾಡಿದೆ.