ಹಾವೇರಿ,ಆಗಸ್ಟ್,28,2021(www.justkannada.in): ಗಣೇಶೋತ್ಸವ ಆಚರಣೆ ಸಂಬಂಧ ಕೋವಿಡ್ ಸ್ಥಿತಿ ಗತಿ ಆಧಾರದಲ್ಲಿ ನಿರ್ಧಾರ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಬಸರಿಹಳ್ಳಿ ಹೆಲಿಪ್ಯಾಡ್ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಗಣೇಶೋತ್ಸವ ಆಚರಣೆ ಸಂಬಂಧ ಆಗಸ್ಟ್ 30 ರಂದು ಸಭೆ ನಡೆಸಿ ಚರ್ಚಿಸಲಾಗುತ್ತದೆ. ರಾಜ್ಯದಲ್ಲಿ ಕೋವಿಡ್ ನ ಸ್ಥಿತಿ ಗತಿ ಹೇಗಿರುತ್ತದೆ ಎಂಬುದನ್ನ ನೋಡಿ ಆಚರಣೆಗೆ ಅನುಮತಿ ನೀಡುವ ಬಗ್ಗೆ ನಿರ್ಧರಿಸುತ್ತೇವೆ ಎಂದರು.
ಇನ್ನು ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಬಸವರಾಜ ಬೊಮ್ಮಾಯಿ, ನಾನು ಯಾರ ಹೇಳಿಕೆಗೂ ಪ್ರತಿಕ್ರಿಯಿಸುವುದಿಲ್ಲ. ಪೊಲೀಸರು ದಕ್ಷರಿದ್ದಾರೆ. ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಮಹದಾಯಿ ಹಾಗೂ ಮೇಕೆದಾಟು ಯೋಜನೆಯನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳುತ್ತೇವೆ. ಇದಕ್ಕೆ ಸಂಬಂಧಿಸಿದಂತೆ ಹಲವಾರು ಪ್ರಕ್ರಿಯೆ ಕುರಿತು ದೆಹಲಿಯಲ್ಲಿ ಚರ್ಚೆ ಮಾಡಿ ಚಾಲನೆ ಕೊಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ENGLISH SUMMARY…
Celebration of Ganesha Utsav: Permission based on COVID status-CM
Haveri, August 28, 2021 (www.justkannada.in): Chief Minister Basavaraj Bommai has informed that permission will be accorded to celebrate the Ganesha festival in the state after assessing the COVID situation.
Speaking to the media persons at the Basarihalli helipad in Haveri District today, he informed that a meeting will be held on August 30 regarding the celebration of the Ganesha festival. “Permission to celebrate the Ganesha festival will be given after assessing the situation of the pandemic,” he said.
In his reply to the gang rape case in Mysuru, the CM refused to comment. “I won’t respond to anybody’s statements. Our police are efficient,” he added.
Keywords: Chief Minister/ Basavaraj Bommai/ COVID status/ Ganesha festival/ celebration
Key words: Ganeshotsav –celebration- Decision -Covid cases-CM Basavaraja Bommai.