ಬೆಂಗಳೂರು, ಸೆಪ್ಟೆಂಬರ್ 05, 2021 (www.justkannada.in): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವತಃ ತಾವೇ ಹೊರಡಿಸಿದ್ದ ಆದೇಶವನ್ನು ಉಲ್ಲಂಘಿಸಿದ್ದಾರೆ.
ಹೌದು. ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ, ದುಬಾರಿ ವೆಚ್ಚದ ಉಡುಗೊರೆಗಳನ್ನು ನೀಡುವುದನ್ನು ನಿಷೇಧಿಸಿದ ಆದೇಶವನ್ನು ಸ್ವತಃ ಸಿಎಂ ಉಲ್ಲಂಘಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದರು.
ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಸಂಸ್ಥೆಗಳ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ, ದುಬಾರಿ ಬೆಲೆಯ ಉಡುಗೊರೆ ನೀಡುವುದನ್ನು ನಿಷೇಧಿಸಿ ಮುಖ್ಯಮಂತ್ರಿಯವರು ಕೆಲ ದಿನಗಳ ಹಿಂದೆ ಆದೇಶ ಹೊರಡಿಸಿದ್ದರು. ಬದಲಿಗೆ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬೇಕು ಎಂದು ಆದೇಶ ಹೊರಡಿಸಿದ್ದರು.
ಇಂದು ನಡೆದ ‘ಮುಖ್ಯಮಂತ್ರಿಗಳ ರೈತ ವಿದ್ಯಾ ನಿಧಿ’ ಉದ್ಘಾಟನಾ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಯವರೇ ರೇಷ್ಮೆ ಗೂಡುಗಳಿಂದ ತಯಾರಾದ ಬೃಹತ್ ಹಾರ, ಮೈಸೂರು ಪೇಟ, ಶಾಲು ಮತ್ತು ಬೆಳ್ಳಿಯ ಸ್ಮರಣಿಕೆಯೊಂದಿಗೆ ಸನ್ಮಾನಿತರಾದರು. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನೂ ಇದೇ ರೀತಿ ಸನ್ಮಾನಿಸಲಾಯಿತು.
Key Note: CM Basavaraj Bommai break his own order, which is don’t use garland for felicitation