ಬೆಂಗಳೂರು, ಸೆಪ್ಟೆಂಬರ್ 18, 2021 (www.justkannada.in): ಧರ್ಮಸ್ಥಳ, ಕುಕ್ಕೆ
ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆ ನಡೆಸಲು ವಾರಾಂತ್ಯದಲ್ಲೂ ಅವಕಾಶ ಕಲ್ಪಿಸಲಾಗಿದೆ.
ಕೋವಿಡ್ ಪಾಸಿಟಿವ್ ದರ ಇಳಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಬಂಧಗಳನ್ನು ತೆರವು ಮಾಡುತ್ತಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.
ಹಲವು ನಿಯಮಗಳನ್ನು ಅನ್ವಯಿಸಿ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ಜಿಲ್ಲಾಧಿಕಾರಿ
ಸೂಚನೆ ನೀಡಿದ್ದಾರೆ.
ದೇವಸ್ಥಾನದ ಆಡಳಿತ ಮಂಡಳಿ ಅಂತಹವರಿಗೆ ಮಾತ್ರ ಸೇವೆಗೆ ಅವಕಾಶ ನೀಡಬೇಕು ಎಂದು ಜಿಲ್ಲಾಡಳಿತ ಆದೇಶಿಸಿದೆ.