ಬೆಂಗಳೂರು, ಸೆಪ್ಟೆಂಬರ್ 21, 2021 (www.justkannada.in): ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಹೊಡೆತದ ಮೇಲೆ ಹೊಡೆತ ಬೀಳಲು ಶುರುವಾಗಿದೆ. ಇಂಗ್ಲೆಂಡ್ ತಂಡ ಪಾಕ್ ಪ್ರವಾಸ ರದ್ದುಗೊಳಿಸಿ ಶಾಕ್ ನೀಡಿದೆ.
ಈ ಹಿಂದೆ ಭದ್ರತಾ ಕಾರಣ ನೀಡಿ ನ್ಯೂಜಿಲೆಂಡ್ ತಂಡ ಪಾಕಿಸ್ತಾನ ಪ್ರವಾಸ ರದ್ದುಗೊಳಿಸಿತ್ತು. ಇದೀಗ ಇಂಗ್ಲೆಂಡ್ ತಂಡ ಕೂಡ ಅದೇ ನಿರ್ಧಾರ ಕೈಗೊಂಡಿದೆ.
ಈ ಹಿಂದಿನ ವೇಳಾಪಟ್ಟಿಯಂತೆ ಅಕ್ಟೋಬರ್ 13 ಮತ್ತು 14 ರಂದು ಪುರುಷರ ತಂಡವು ಎರಡು ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಪಾಕಿಸ್ತಾನದಲ್ಲಿ ಆಡಬೇಕಿತ್ತು.
ಪಾಕಿಸ್ತಾನಕ್ಕೆ ಪ್ರಯಾಣಿಸುವುದರ ಬಗ್ಗೆ ಆತಂಕ ವ್ಯಕ್ತವಾಗಿರುವುದು ನಮಗೆ ತಿಳಿದಿದೆ. ಕೋವಿಡ್ ಪರಿಸರದಲ್ಲೂ ಈಗಾಗಲೇ ದೀರ್ಘಾವಧಿಯ ಕಾರ್ಯಾಚರಣೆಯನ್ನು ನಿಭಾಯಿಸಿದ ತಂಡಕ್ಕೆ ಮುಂದಿನ ಪ್ರವಾಸವು ಮತ್ತಷ್ಟು ಒತ್ತಡವನ್ನು ನೀಡುತ್ತದೆ ಎಂದು ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯ ತಿಳಿಸಿದೆ.
key words: england cricket team cancel pak tour