ಬೆಂಗಳೂರು,ಸೆಪ್ಟಂಬರ್,25,2021(www.justkannada.in): ಕೇಂದ್ರ ಸರ್ಕಾರದ ಕೃಷಿ ತಿದ್ಧುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಸೆಪ್ಟಂಬರ್ 27ಕ್ಕೆ ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ರಕ್ಷಣೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬಂದ್ ಗೆ ಕರೆ ಕೊಟ್ಟರೆ ನಾನ್ಯಾಕೆ ಪ್ರತಿಕ್ರಿಯೆ ನೀಡಲಿ. ಈಗ ತಾನೇ ಜನ ಕೋವಿಡ್ ಸಂಕಷ್ಟದಿಂದ ಹೊರ ಬಂದಿದ್ದಾರೆ. ಕಳೆದ ಒಂದುವರೆ ವರ್ಷದಿಂದ ಸ್ಥಗಿತಗೊಂಡಿದ್ಧ ಚಟುವಟಿಕೆಗಳು ಈಗ ಶುರವಾಗಿವೆ. ಬೇರೆ ಬೇರೆ ವೃತ್ತಿಯಲ್ಲಿ ಈಗಷ್ಟೇ ಕೆಲಸ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೇಂದ್ರ ಸರ್ಕಾರದ ಕೃಷಿ ತಿದ್ಧುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಸೆಪ್ಟಂಬರ್ 27ಕ್ಕೆ ಭಾರತ್ ಬಂದ್ ಗೆ ಭಾರತೀಯ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದು ವಿವಿಧ ಸಂಘಟನೆಗಳು ಬೆಂಬಲಿಸಿವೆ.
Key words: Bharat Bandh – Sept. 27-Protection – public-CM -Basavaraja Bommai.