ದಾವಣಗೆರೆ,ಅಕ್ಟೋಬರ್,16,2021(www.justkannada.in): ತಜ್ಞರ ಸಲಹೆ ಪಡೆದು ಶಾಲೆ ಆರಂಭದ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ದಾವಣಗೆರೆಯಲ್ಲಿ ಈ ಕುರಿತು ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ತಜ್ಞರ ಜತೆ ಚರ್ಚಿಸಿ 1ರಿಂದ 5ನೇ ತರಗತಿ ಆರಂಭಕ್ಕೆ ನಿರ್ಧಾರ ಮಾಡುತ್ತೇವೆ. ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.1ಕ್ಕಿಂತ ಕಡಿಮೆ ಇದೆ. ಹೀಗಾಗಿ ಕೋವಿಡ್ ಗೈಡ್ ಲೈನ್ ಸರಳೀಕರಣ ಮಾಡುವ ಬಗ್ಗೆ ತಜ್ಞರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಶೀಘ್ರದಲ್ಲೇ ಕೋವಿಡ್ ಗೈಡ್ ಲೈನ್ ಸರಳೀಕರಣ ಮಾಡುತ್ತೇವೆ ಎಂದು ತಿಳಿಸಿದರು.
ದಸರಾ ಹಬ್ಬ ಮುಗಿದ ಬಳಿಕ 1ರಿಂದ 5ನೇ ತರಗತಿ ಆರಂಭದ ಬಗ್ಗೆ ತಜ್ಞರ ಜತೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಸಿಎಂ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಇತ್ತೀಚೆಗೆ ತಿಳಿಸಿದ್ದರು.
Key words: Guidelines –simplification- soon-CM basavaraja Bommai