ಬೆಂಗಳೂರು, ಅಕ್ಟೋಬರ್ 17, 2020 (www.justkannada.in): ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಮತ್ತು ಮಾರಾಟ ತೆರಿಗೆಯನ್ನು ಕಡಿಮೆ ಮಾಡುವ ಬಗ್ಗೆ ಸಿಎಂ ಸುಳಿವು ನೀಡಿದ್ದಾರೆ.
ರಾಜ್ಯದಲ್ಲಿ ಇಂಧನ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಹೀಗಾಗಿ ಜನರ ಮೇಲಿನ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಇಂಧನದ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವ ಸೂಚನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಎಲ್ಲವೂ ಆರ್ಥಿಕತೆಯ ಮೇಲೆ ಅವಲಂಬಿತವಾಗಿದೆ. ನಾನು ಆರ್ಥಿಕ ಪರಿಶೀಲನಾ ಸಭೆಯನ್ನು ಕರೆದಿದ್ದೇನೆ ಎಂದು ತಿಳಿಸಿದ್ದಾರೆ.
ಈ ಹಿಂದೆ, ರಾಜ್ಯದಲ್ಲಿ ಇಂಧನದ ಮೇಲಿನ ಯಾವುದೇ ತೆರಿಗೆ ವಿನಾಯಿತಿಯನ್ನು ಮುಖ್ಯಮಂತ್ರಿ ತಿರಸ್ಕರಿಸಿದ್ದರು. ಭಾನುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಮತ್ತೆ ಲೀಟರ್‌ಗೆ 35 ಪೈಸೆ ಏರಿಕೆಯಾಗಿದೆ.