ಬೆಂಗಳೂರು,ನವೆಂಬರ್,1,2021(www.justkannada.in): ಭಾರತದಲ್ಲಿ ಕನ್ನಡ ಭಾಷೆಯು ಅತ್ಯಂತ ಪುರಾತನವಾದ ಭಾಷೆಯಾಗಿದೆ. ಕನ್ನಡವೆಂಬ ತಾಯಿ ದೇವರನ್ನು ರಕ್ಷಿಸಬೇಕು. ಕನ್ನಡವನ್ನ ಹೆಮ್ಮರವಾಗಿ ಬೆಳೆಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಕರೆ ನೀಡಿದರು.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಾಡಿನ ಜನತೆಗೆ 66ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಎಲ್ಲಾ ರಂಗಗಳಲ್ಲಿಯೂ ಕನ್ನಡಕ್ಕೆ ಸ್ಥಾನ ಸಿಗಬೇಕು. ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಬೇಕು. ಕನ್ನಡಿಗರು ಪ್ರತಿದಿನವೂ ಕನ್ನಡದಲ್ಲೇ ಮಾತನಾಡಬೇಕು. ಕನ್ನಡಕ್ಕೆ ನಮ್ಮಲ್ಲರನ್ನು ಒಂದುಗೂಡಿಸುವ ಶಕ್ತಿ ಹೊಂದಿದೆ. ಕನ್ನಡವೆಂಬ ತಾಯಿ ದೇವರನ್ನು ಸಂರಕ್ಷಿಸಬೇಕು. ಕನ್ನಡವನ್ನು ಹೆಮ್ಮರವಾಗಿ ಬೆಳೆಸಬೇಕು. ಭಾಷೆ ಸದೃಢವಾದರೆ ರಾಜ್ಯ ಶಕ್ತಿಶಾಲಿಯಾಗುತ್ತದೆ ಎಂದರು.
ಕನ್ನಡ ಸಾಹಿತ್ಯವನ್ನು ಇಡೀ ದೇಶಕ್ಕೆ ಮುಟ್ಟಿಸುವುದು. ಕನ್ನಡ ಬಾರದವರಿಗೆ ಕನ್ನಡ ಕಲಿಸುವುದು. ವಿದ್ಯಾರ್ಥಿಗಳಿಗೆ ಎಲ್ಲಾ ಹಂತದಲ್ಲಿ ಕನ್ನಡ ಕಲಿಸುವುದು. ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಬೇಕು. ಆಗ ಮಾತ್ರ ಕನ್ನಡ ಮತ್ತು ಕರ್ನಾಟಕ ಅಭಿವೃದ್ಧಿಯಾಗುತ್ತದೆ. ಹೊಸ ಶಿಕ್ಷಣ ನೀತಿಯಲ್ಲಿ ಕನ್ನಡಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತದೆ.
Key words: 66th-kannada rajyotsava- Mother- Kannada -should –protect- God- CM Basavaraja Bommai