ಬೆಂಗಳೂರು,ಜು,26,2019(www.justkannada.in): ಬಹುಮತವಿಲ್ಲದಿದ್ದರೂ ರಾಜ್ಯಪಾಲರು ಬಿಜೆಪಿ ಸರ್ಕಾರ ರಚನೆ ಮಾಡುವುದಕ್ಕೆ ಅವಕಾಶ ಕೊಟ್ಟಿರುವುದು ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ ಎಂದು ಜೆಡಿಎಸ್ ಟ್ವಿಟ್ಟರ್ ನಲ್ಲಿ ಟೀಕಿಸಿದೆ.
ಈ ಬಗ್ಗೆ ಟ್ವಿಟ್ ಮಾಡಿ ಬಿಜೆಪಿ ಸರ್ಕಾರ ರಚನೆಗ ಕುರಿತು ಕಿಡಿಕಾರಿರುವ ಜೆಡಿಎಸ್, ವಿಧಾನಸಭೆಯ ಸಂಖ್ಯಾಬಲ 222, ಬಹುಮತಕ್ಕೆ ಬೇಕಾಗಿರುವ ಸಂಖ್ಯಾಬಲ 112, ಆದರೆ ಬಿ.ಎಸ್. ಯಡಿಯೂರಪ್ಪ ನನಗೆ 105 ಶಾಸಕರ ಬೆಂಬಲವಿದೆ ಎಂದು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಆದರೆ, ರಾಜ್ಯಪಾಲರು ಸರ್ಕಾರ ರಚನೆಯ ಕುರಿತು ಯಾವುದೇ ಅನುಮಾನ ವ್ಯಕ್ತಪಡಿಸದೇ ಒಂದೇ ನಿಮಿಷದಲ್ಲಿ ಅನುಮತಿ ನೀಡಿದ್ದು ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಇಂದು ಸಂಜೆ ಬಿಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದಕ್ಕೆ ಕಾಂಗ್ರೆಸ್ ನ ನಾಯಕರೂ ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Key words: anti-democratic -decision – BJP- allowed -formation – government- JDS- Criticism