ಮೈಸೂರು,ನವೆಂಬರ್,9,2021(www.justkannada.in): ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬಿಟ್ ಕಾಯಿನ್ ವಿಚಾರದಲ್ಲಿ ಆಡಳಿತ ಪಕ್ಷ ಅಥವಾ ವಿರೋಧ ಪಕ್ಷದವರು ಯಾರೇ ಇರಲಿ. ನೀವೂ ಮೊದಲು ತನಿಖೆ ಆರಂಭಿಸಿ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಬಿಟ್ ಕಾಯಿನ್ ಪ್ರಕರಣ ಕುರಿತು ಚುರುಕಾಗಿ ಯಾಕೆ ತನಿಖೆ ಆರಂಭಿಸುತ್ತಿಲ್ಲ. ನನ್ನ ಬಳಿಯೇ ಸರ್ಕಾರ ಸಾಕ್ಷಿ ಕೇಳುತ್ತಿದೆ. ಅದರ ಸಾಕ್ಷಿ ಹುಡುಕಬೇಕಾದವರು, ತನಿಖೆ ಮಾಡಬೇಕಾದವರು ತನಿಖಾಧಿಕಾರಿಗಳು. ಆ ಕೆಲಸವನ್ನು ಸರ್ಕಾರ ಮಾಡಿಸಲಿ. ನನ್ನ ಬಳಿ ಇರುವ ಮಾಹಿತಿಯನ್ನು ಅಗತ್ಯವಿದ್ದರೆ ಕೋರ್ಟ್ಗೆ ಕೊಡುತ್ತೇವೆ. ಈ ಬಾರಿಯ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸಲು ಇನ್ನು ಸಾಕ್ಷಿಗಳು ಬೇಕಿವೆ. ನಾನು ಸಾಕ್ಷಿಗಳ ಸಂಗ್ರಹದಲ್ಲಿ ಇದ್ದೇನೆ. ನಾನು ನನ್ನ ಬಳಿ ಇರುವ ವಿಚಾರವನ್ನ ಹಂಚಿಕೊಳ್ಳುತ್ತಿದ್ದೇನೆ ಅಷ್ಟೇ ಎಂದರು.
ಯಾಕೆ ನಾವು ಒಂದೇ ವೇದಿಕೆಯಲ್ಲಿ ಬರಬಾರದಾ..?
ಶಾಸಕ ಜಿಟಿ ದೇವೇಗೌಡ ಹಾಗೂ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಭಾಗಿಯಾಗುತ್ತಾರೆಂಬ ಸುದ್ದಿಯಾದ ಹಿನ್ನೆಲೆ ಈ ಕುರಿತು ಪ್ರತಿಕ್ರಿಯಿಸಿರುವ ಸಿದ್ಧರಾಮಯ್ಯ, ಯಾಕೆ ನಾವು ಒಂದೇ ವೇದಿಕೆಯಲ್ಲಿ ಬರಬಾರದ..? ಅವರು ಕಾಂಗ್ರೆಸ್ ಸೇರುತ್ತಾರೆ ಬಿಡುತ್ತಾರೆ ಅದು ಬೇರೆ ವಿಚಾರ. ಗುಬ್ಬಿ ಶಾಸಕ ಶ್ರೀನಿವಾಸ್ ಗೆ ಅನೌಪಚಾರಿಕವಾಗಿ ಪಕ್ಷಕ್ಕೆ ಆಹ್ವಾನಿಸಿದ್ದೆ. ಅದನ್ನು ಇದನ್ನು ನೀವು ಹೋಲಿಸಬೇಡಿ ಎಂದು ತಿಳಿಸಿದರು.
ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿದ್ಧರಾಮಯ್ಯ, ಡಿಪಿಆರ್ ಮಾಡುವುದು ತಡವಾಗಿತ್ತು. ಆದರು ನಾವು ಡಿಪಿಆರ್ ಮಾಡಿ ಮುಗಿಸಿದ್ದೇವೆ. ಈಗ ಇವರು ಕಾಮಗಾರಿ ಆರಂಭಿಸಲು ವಿಳಂಬ ಮಾಡುತ್ತಿದ್ದಾರೆ. ಕಾಂಗ್ರೆಸ್ ನವರು ತಡವಾಗಿ ಡಿಪಿಆರ್ ಮಾಡಿದ್ದಾರೆ ಎಂಬ ಸಿಎಂ ಹೇಳಿಕೆಯಲ್ಲಿ ಅರ್ಥ ಇಲ್ಲ. ನಾವು ಈಗ ಕಾಮಗಾರಿ ಆರಂಭಿಸಿ ಎಂದು ಕೇಳುತ್ತಿದ್ದೇವೆ. ಸರ್ಕಾರ ಯಾಕೆ ವಿಳಂಬ ಮಾಡುತ್ತಿದೆ. ಒತ್ತಡ ಏರಲೇಬೇಕಾದ ಸನ್ನಿವೇಶದಲ್ಲೇ ಇದ್ದೇವೆ, ಹಾಗಾಗಿ ಒತ್ತಡ ಹೇರಿದ್ದೇವೆ. ನಾವು ಒತ್ತಡ ಹೇರದಿದ್ದರೆ ಇವರು ಕೆಲಸ ಆರಂಭಿಸುವುದಿಲ್ಲ. ಸರ್ಕಾರದ ಮೇಲೆ ಒತ್ತಡ ಹೇರದಿದ್ದದರೆ ಇವರು ಕೆಲಸ ಆರಂಭಿಸುವುದಿಲ್ಲ. ಕೋರ್ಟ್ ಅಡ್ಡಿ ಇದೆ ಎಂಬುದೆಲ್ಲ ಸುಳ್ಳು. ಕೇಂದ್ರದಿಂದ ಒಪ್ಪಿಗೆ ಪಡೆದು ತುರ್ತಾಗಿ ಯೋಜನೆ ಆರಂಭಿಸಬೇಕು. ಇದಕ್ಕಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು.
ಬೊಮ್ಮಾಯಿ ನೀರಾವರಿ ಸಚಿವರಾಗಿದ್ದರು.ಕೆಲಸ ಮಾಡಲು ಯಾವುದೇ ಅಡೆತಡೆ ಇಲ್ಲ. ಕೋರ್ಟ್ ಆದೇಶ ಕೂಡ ಕ್ಲಿಯರ್ ಆಗಿದೆ. ತಮಿಳುನಾಡಿನವರು ರಾಜಕೀಯವಾಗಿ ಕ್ಯಾತೆ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ಬಂದು ಎರಡು ಕಾಲು ವರ್ಷ ಆಯ್ತು. ಏನು ಕೆಲಸಗಳು ಆಗ್ತಿಲ್ಲ ಎಂದು ಸಿದ್ಧರಾಮಯ್ಯ ಆರೋಪಿಸಿದರು.
Key words: BitCoin – about-first -investigate -Former CM- Siddaramaiah