ಬೆಂಗಳೂರು,ನವೆಂಬರ್,12,2021(www.justkannada.in): ರಾಜ್ಯದಲ್ಲಿ ಬಿಟ್ ಕಾಯಿನ್ ದಂಧೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ, ಆರೋಪ ಪ್ರತ್ಯಾರೋಪ ಮುಂದುವರೆದಿದ್ದು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಬಿಟ್ ಕಾಯಿನ್ ದಂಧೆ ನಡೆದಿದೆ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿ ಆರೋಪಿಸಿದೆ.
ಈ ಕುರಿತು ಟ್ವಿಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಬಿಟ್ ಕಾಯಿನ್ ದಂಧೆಯ ಆರೋಪಿ ಶ್ರೀಕಿಯನ್ನು ಸಿದ್ಧರಾಮಯ್ಯ ಅವಧಿಯಲ್ಲಿ ಬಂಧಿಸಿ ಬಿಡುಗಡೆಗೊಳಿಸಲಾಗಿತ್ತು. ಸಿದ್ಧರಾಮಯ್ಯ ಸಿಎಂ ಆಗಿದ್ದಾಗ ಬಿಟ್ ಕಾಯಿನ್ ದಂಧೆ ನಡೆದಿದೆ. ಈ ದಂಧೆಯ ಆರೋಪಿಯು ಯುವ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಮಹಮ್ಮದ್ ನಲಪಾಡ್ ಹಾಗೂ ಮಾಜಿ ಸಚಿವ ಲಮಾಣಿ ಪುತ್ರ ದರ್ಶನ್ ನಡುವೆ ಅವ್ಯವಹಾರ ನಡೆಸಿರುವ ಬಗ್ಗೆ ನ್ಯಾಯಾಲಯದಲ್ಲಿ ಸಲ್ಲಿಸಲಾದ ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಿದೆ ಎಂದು ಆರೋಪಿಸಿದೆ.
Key words: bitcoin – happened -Siddaramaiah – CM-State BJP