ಕ್ಯಾನ್ಸರ್ ಚಿಕಿತ್ಸೆಗೆ ಕಾರ್ಟಿ ಕಂಪನಿಗಳು ಅಗತ್ಯ- ಪುಲಿಟ್ಜರ್ ಪ್ರಶಸ್ತಿ ಪುರಸ್ಕೃತ ಸಿದ್ಧಾರ್ಥ ಮುಖರ್ಜಿ ಅಭಿಪ್ರಾಯ.

ಬೆಂಗಳೂರು,ನವೆಂಬರ್,18,2021(www.justkannada.in):  ಕ್ಯಾನ್ಸರ್ ಬಾಧೆಗೆ ಪರಿಣಾಮಕಾರಿ ಚಿಕಿತ್ಸೆಯು ಜನರ ಕೈಗೆಟುಕಬೇಕಾದರೆ ದೇಶದಲ್ಲಿ ಕಾರ್ಟಿ ಕಂಪನಿಗಳು ಸ್ಥಾಪನೆಯಾಗಬೇಕು ಎಂದು ಪುಲಿಟ್ಜರ್ ಪ್ರಶಸ್ತಿ ಪುರಸ್ಕೃತ ವೈದ್ಯವಿಜ್ಞಾನ ಲೇಖಕ ಡಾ.ಸಿದ್ಧಾರ್ಥ ಮುಖರ್ಜಿ ಅಭಿಪ್ರಾಯಪಟ್ಟರು.

ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯನ್ನು ಉದ್ದೇಶಿಸಿ ಗುರುವಾರ ವರ್ಚುಯಲ್ ರೂಪದಲ್ಲಿ ಮಾತನಾಡಿದ ಅವರು, ಪಕ್ಕದ ಚೀನಾದಲ್ಲಿ ಇಂತಹ 300 ಕಂಪನಿಗಳಿದ್ದು, ಅಮೆರಿಕದಲ್ಲಿ ನೂರಾರು ಉದ್ದಿಮೆಗಳಿವೆ. ಆದರೆ, ಐಟಿ ವಲಯದಲ್ಲಿ ಜಗತ್ತಿಗೇ ಮಾದರಿಯಾಗಿರುವ ಭಾರತದಲ್ಲಿ ಕಾರ್ಟಿ ಕಂಪನಿಗಳು ಇಲ್ಲದಿರುವುದು ನೋವಿನ ಸಂಗತಿ ಎಂದರು.

ಭಾರತವು ಕಂಪ್ಯೂಟರ್ ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನದಲ್ಲಿ ಅಪಾರ ಪರಿಣತಿ ಸಾಧಿಸಿರುವುದು ನಿಜ. ಆದರೆ ಇಲ್ಲಿ ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳೂ ಹೆಚ್ಚಾಗಿದ್ದು, ಇದಕ್ಕೆ ಕೈಗೆಟುಕುವಂತಹ ಚಿಕಿತ್ಸೆ ಸಿಕ್ಕುತ್ತಿಲ್ಲ. ಇದಕ್ಕಾಗಿ ಎಲ್ಲರೂ ಅಮೆರಿಕ, ಇಂಗ್ಲೆಂಡ್ ಮತ್ತು ಜರ್ಮನಿಗಳಿಗೆ ಹೋಗುವುದು ಸಾಧ್ಯವಿಲ್ಲ. ಆದ್ದರಿಂದ ನಮ್ಮಲ್ಲಿ ವ್ಯವಸ್ಥೆ ಮತ್ತು ಶೋಧನಾ ನಿಧಿ ಹೂಡಿಕೆದಾರರ ಮನೋಭಾವನೆ ಬದಲಾಗಬೇಕಾದ ಜರೂರಿದೆ ಎಂದು ಅವರು ಹೇಳಿದರು.

ಕ್ಯಾನ್ಸರ್ ಚಿಕಿತ್ಸೆಗೆ ಈಗ ಕಾರ್ಟಿ ಥೆರಪಿ, ಇಮ್ಯುನೋಥೆರಪಿ, ಜೀನ್ ಥೆರಪಿ, ಜೀನ್ ಎಡಿಟಿಂಗ್ ಮುಂತಾದವು ಪ್ರವರ್ಧಮಾನಕ್ಕೆ ಬರುತ್ತಿರುವ ಕ್ರಮಗಳಾಗಿವೆ. ಇವು ಮಕ್ಕಳಲ್ಲಿ ಕಂಡುಬರುವ ಕ್ಯಾನ್ಸರ್, ಮೈಲೋಮಾ, ಲಿಂಫೋಮಾ, ಸ್ತನ ಕ್ಯಾನ್ಸರ್ ಮುಂತಾದವನ್ನು ವಾಸಿ ಮಾಡುವಷ್ಟು ಪರಿಣಾಮಕಾರಿಯಾಗಿವೆ ಎಂದು ಸಿದ್ಧಾರ್ಥ ವಿವರಿಸಿದರು.

ಕ್ಯಾನ್ಸರ್ ಚಿಕಿತ್ಸೆಯಲ್ಲಿ ಈಗ ರೇಡಿಯೇಷನ್ ಮತ್ತು ಕೀಮೋಥೆರಪಿಗಳಲ್ಲದೆ ಹೊಸ ವಿಧಾನಗಳೂ ಬರುತ್ತಿವೆ. ಆದರೆ, ಇವುಗಳನ್ನು ಸರಿಯಾಗಿ ಗುರುತಿಸುವ ಕೆಲಸವಾಗಿಲ್ಲ. ಚೀನಾ ಸಾಧನೆ ಮಾಡುವುದು ಸಾಧ್ಯವಾದರೆ ಭಾರತವೂ ಮಾಡಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಆರೋಗ್ಯ ಕ್ಷೇತ್ರವನ್ನು ರಾಷ್ಟ್ರ ನಿರ್ಮಾಣದ ಭಾಗವೆಂದು ಪರಿಗಣಿಸಬೇಕು. ಇದಕ್ಕಾಗಿ ಸರಕಾರಗಳು ಅಮೆರಿಕದ ಮಾದರಿಯಲ್ಲಿ ಆಯೋಗ ರಚಿಸಿ, 6ರಿಂದ 8 ತಿಂಗಳಲ್ಲಿ ವರದಿ ಪಡೆದುಕೊಳ್ಳಬೇಕು. ಜತೆಗೆ ಅಗತ್ಯ ಭೂಮಿ ಮೀಸಲಿಟ್ಟು, ಬಂಡವಾಳ ನೆರವು, ತೆರಿಗೆ ಕಡಿತ ಮತ್ತು ಇನ್ನಿತರ ಉತ್ತೇಜಕ ಕ್ರಮಗಳನ್ನು ತ್ವರಿತ ಗತಿಯಲ್ಲಿ ಅನುಷ್ಠಾನಕ್ಕೆ ತರಬೇಕು ಎಂದು ಸಲಹೆ ನೀಡಿದರು.

ರಾಜ್ಯ ಸರಕಾರದ ಜೈವಿಕ ತಂತ್ರಜ್ಞಾನ ವಿಷನ್ ಗ್ರೂಪ್ ಮುಖ್ಯಸ್ಥೆ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಷಾ ಸಂವಾದವನ್ನು ನಡೆಸಿಕೊಟ್ಟರು.

Key words: Carty companies -need -cancer –treatment-Pulitzer Prize Winner- Siddhartha Mukherjee.

ENGLISH SUMMARY…

Pulitzer Prize-winner at BTS-2021
Give special status to healthcare, Food, Agri, Biotech, and Medicine: Dr. Mukherjee

Bengaluru: Pulitzer Prize winner Dr. Siddharth Mukherjee opined that it is necessary to accord special sector status to health infrastructure, food, agriculture biotechnology, and medical sciences.

Addressing the plenary session at the ‘Bengaluru Tech Summit-2021’ on Thursday, he said technologies should be made affordable and easier to use.

“It is not a joke to build a nation. The progress of a nation is measured by discoveries and research activities” he said.

Dr Mukherjee said India has made rapid strides in computer science and information technology but it is unfortunate that people are unable to afford the high cost of cancer disease treatment even as the number of patients afflicted with the disease has risen. He said it is not possible for all Indian families to visit England, US or Germany to undergo treatment for cancer and so it is necessary for investors to change their attitude.

He said immunotherapy, gene therapy, and gene editing among others are gaining traction in the treatment of cancer disease and they have been effective in treating children suffering from cancer and others suffering from myeloma, lymphoma, and breast cancer.

Dr. Mukherjee said the healthcare sector should be treated on par with nation-building. He said India should constitute a commission on the American model to elevate the healthcare sector and get the recommendations in six-eight months. The government could provide land and funds with tax breaks and cuts to expedite the process.

He said new methods have come up to treat cancer without radiotherapy and chemotherapy but they haven’t got the due recognition. He said China could achieve success so could India.
Dr. Mukherjee said he had floated nine companies in the US and had invested a huge amount to offer affordable treatment of cancer. One of the companies Vor had developed medicine to treat thalassemia which has proven to be effective using gene-editing technology.

Kiran Mazumdar Shaw, chairman of the vision group on biotechnology, the government of Karnataka, moderated the discussion.