ಧಾರವಾಡ,ನವೆಂಬರ್,23,2021(www.justkannada.in): ರಾಜ್ಯ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಈ ಮಧ್ಯೆ ಕಾಂಗ್ರೆಸ್ ನಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ಧ ವಿಧಾನಪರಿಷತ್ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಅವರಿಗೆ ಟಿಕೆಟ್ ಕೈ ತಪ್ಪಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹೆಚ್.ಕೆ ಪಾಟೀಲ್, ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುವುದಕ್ಕೆ ತೀರ್ಮಾನವಾಗಿತ್ತು. ಹೀಗಾಗಿ ಎಸ್.ಆರ್ ಪಾಟೀಲ್ ಅವರಿಗೆ ಪರಿಷತ್ ಚುನಾವಣೆ ಟಿಕೆಟ್ ಕೈತಪ್ಪಿದೆ. ಟಿಕೆಟ್ ಹಂಚಿಕೆಯಲ್ಲಿ ಪೈಪೋಟಿ ಇದ್ದೆ ಇರುತ್ತದೆ. ಕೆಲವು ಕಡೆಗಳಲ್ಲಿ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.
ಇನ್ನು ಎಸ್ .ಆರ್ ಪಾಟೀಲ್ ಅವರಿಗೆ ಟಿಕೆಟ್ ಮಿಸ್ ಆಗಿದ್ದಕ್ಕೆ ಅವರ ಅಭಿಮಾನಿಗಳು ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Key words: legislative Council –election- SR Patil -miss –ticket- Former minister- HK Patil