ಊಟಿ,ಡಿಸೆಂಬರ್,8,2021(www.justkannada.in): ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನ ಊಟಿಯ ಕೂನೂರು ಬಳಿ ಪತನವಾಗಿದ್ದು ಘಟನಾ ಸ್ಥಳದಲ್ಲಿ 7 ಮೃತದೇಹಗಳು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸೇನೆಯ ಹಿರಿಯ ಅಧಿಕಾರಿಗಳು ಸೇರಿ ಒಟ್ಟು 14 ಮಂದಿ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (CDS) ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಕೂಡ ಇದ್ದರು ಎಂದು ಹೇಳಲಾಗುತ್ತಿದೆ. ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರುಸೇವಕ್ ಸಿಂಗ್, ನಾಯಕ್ ಜಿತೇಂದರ್ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯ್ತೇಜ್, ಹವಲ್ದಾರ್ ಸತ್ಪಾಲ್ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ.
ಅವರಲ್ಲಿ ಮೂವರನ್ನು ರಕ್ಷಿಸಲಾಗಿದೆ. ಈ ಮೂವರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಪಿನ್ ರಾವತ್ ಅವರಿಗೂ ಗಾಯಗಳಾಗಿದ್ದು ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮಾಡಿದ್ದು,. ಸಿಡಿಎಸ್ ಬಿಪಿನ್ ರಾವತ್ ಇದ್ದ IAF Mi-12V5 ಸೇನಾ ವಿಮಾನ ಇಂದು ತಮಿಳುನಾಡಿನ ಕುನೂರ್ ಬಳಿ ಅಪಘಾತಕ್ಕೀಡಾಗಿದೆ. ಪತನಕ್ಕೆ ಕಾರಣವೇನು ಎಂಬುದನ್ನು ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ.
ಘಟನೆ ಕುರಿತು ಪ್ರಧಾನಿ ಮೋದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದು ಘಟನ ಸ್ಥಳಕ್ಕೆ ರಾಜನಾಥ್ ಸಿಂಗ್ ಅವರು ಭೇಟಿ ನೀಡುವ ಸಾಧ್ಯತೆ ಇದೆ.
Key words: 7 dead- bodies -found – military helicopter –crash- CDS- chief -Bipin Rawat -hospitalized.