ಎಥೆನಲ್ ನೀತಿ ಜಾರಿಗೆ ನಿರ್ಣಯ: ಸಚಿವ ಶಂಕರ್ ಪಾಟೀಲ್ ಮುನೇಕೊಪ್ಪ
ಬೆಳಗಾವಿ.14: ರಾಜ್ಯದ ಕಬ್ಬು, ಮಕ್ಕೆಜೋಳ, ಭತ್ತ ಬೆಳಗಾರರನ್ನು ಆರ್ಥಿಕವಾಗಿ ಸಬಲ ಮಾಡುವ ನಿಟ್ಟಿನಲ್ಲಿ ಒಂದು ತಿಂಗಳ ಒಳಗಾಗಿ ಎಥನಾಲ್ ನೀತಿ ಜಾರಿಗೆ ನಿರ್ಣಯ ಸರ್ಕಾರ ನಿರ್ಧರಿಸಿದೆ ಎಂದು ಜವಳಿ ಮತ್ತು ಕೈಮಗ್ಗ ಅಭಿವೃದ್ಧಿ ಹಾಗೂ ಸಕ್ಕರೆ ಖಾತೆ ಸಚಿವರೂ ಆದ ಶಂಕರಪಾಟೀಲ್ ಬ ಮುನೇನಕೊಪ್ಪ ಹೇಳಿದರು.
ಬೆಳಗಾವಿ ಸುವರ್ಣಸೌಧದಲ್ಲಿ ಗುರುವಾರ ಆಯೋಜಿಸಿದ್ದ ಕಬ್ಬು ಬೆಳೆಗಾರರು, ಕಾರ್ಖಾನೆ ವ್ಯವಸ್ಥಾಪಕರು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ಬಳಿಕ ಅವರು ಮಾತನಾಡಿದರು.
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಲಭಿಸಬೇಕು ಎಂಬ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಎಥೆನಾಲ್ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ.
ಕೇಂದ್ರ ಸರ್ಕಾರ ಎಥನಾಲ್ ಬಳಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದೆ. ಇದರಿಂದ ರೈತರಿಗೆ ಅನುಕೂಲವಾಗಿದೆ.
ಪ್ರಸ್ತುತ ಎಥೆನಾಲ್ ಪರ್ಯಾಯ ಹಾಗೂ ಸಹ ಇಂಧನವಾಗಿ ಬಳಕೆಯಾಗುತ್ತದೆ. ಇದರಿಂದ ಇಂಧನ ಸಮಸ್ಯೆ ಉತ್ತರ ದೊರೆಯಲಿದ್ದು. ಹೆಚ್ಚಿನ ಉದ್ಯೋಗ ಸೃಷ್ಠಿಯಾಗಲಿದೆ. ಸರ್ಕಾರಕ್ಕೂ ಆದಾಯ ಬರುವುದು.
ಎಥೆನಾಲ್ ಜಾರಿಗೊಳಿಸುವಿಕೆಯಿಂದ ಕಬ್ಬು ಬೆಳೆದ ರೈತರಿಗೆ ಸಮಯಕ್ಕೆ ಸರಿಯಾಗಿ ಹಣ ಲಭಿಸಲಿದೆ, ಸಕ್ಕರೆ ಕಾರ್ಖಾನೆಗಳು ಸಹ ಆರ್ಥಿಕ ಸಂಕಷ್ಟದಿಂದ ಹೊರಬರಲು ಸಹಾಯಕ ವಾಗಲಿದೆ ಎಂದರು.
ಇತರೆ ರಾಜ್ಯಗಳಾದ ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ಎಥೆನಲ್ ಉತ್ಪಾದನೆ ಮಾಡುತ್ತಿರುವ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚನೆ ಮಾಡಲಾಗುವುದು. ಸಮಿತಿ ನೀಡಿದ ವರದಿಯನ್ನು ಪರಿಶೀಲಿಸಿ, ತ್ವರಿತವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಾಜಿ ಉಪ ಮುಖ್ಯಮಂತ್ರಿ ಲಕ್ಷಣ ಸವದಿ ಈ ಕುರಿತು ಎರೆಡು ದಿನಗಳ ಹಿಂದೆ ಸಲಹೆ ನೀಡಿದ್ದರು. ಇದಕ್ಕೆ ಸ್ಪಂದಿಸಿ ಇಂದು ಸಭೆ ನೆಡೆಸಿ ನಿರ್ದೇಶನ ನೀಡಲಾಗಿದೆ ಎಂದರು.
ಸಭೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಉಮೇಶ್ ಕತ್ತಿ, ಶಿವರಾಮ್ ಹೆಬ್ಬಾರ್ , ವಾದಕರಾದ ಪಿ.ರಾಜೀವ್,
ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ರೈತ ಮುಖಂಡರು, ಕಾರ್ಖಾನೆ ಮಾಲಿಕರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.