ಬೆಳಗಾವಿ, ಡಿಸೆಂಬರ್ 17, 2021 (www.justkannada.in): ಮುಂದಿನ ಶೈಕ್ಷಣಿಕ ವರ್ಷದಿಂದ ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ರಾಜ್ಯ ಸರಕಾರ ಯೋಜನೆ ರೂಪಿಸಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಕುರಿತು ಮಾಹಿತಿ ನೀಡಿದ್ದಾರೆ. ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಪರಿಚಯಿಸಲು ಯೋಚನೆ ಮಾಡಿದ್ದೇವೆ.
ಅಲ್ಲಿರುವ ಸಿಬ್ಬಂದಿಗೆ ತರಬೇತಿ ನೀಡಿ ಬಳಸಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣದಲ್ಲಿ ಹಂತ ಹಂತವಾಗಿ ಎನ್ ಇಪಿ ಜಾರಿ ಮಾಡಲಾಗುತ್ತದೆ. 26 ಪೊಸಿಶನ್ ಪೇಪರ್ ಸಲ್ಲಿಕೆಯಾಗುತ್ತಿದೆ. ತಜ್ಞರ ತಂಡ ರಚಿಸಿದ್ದು, 3-4 ಸಭೆಗಳು ನಡೆದಿವೆ ಎಂದು ಮಾಹಿತಿ ನೀಡಿದ್ದಾರೆ.