ಕೋವಿಡ್ ಹೆಚ್ಚಳ ಹಿನ್ನೆಲೆ: ಸಂಪೂರ್ಣ ಲಾಕ್ ಡೌನ್ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದು ಹೀಗೆ.

ಬೆಂಗಳೂರು,ಜನವರಿ,7,2022(www.justkannada.in):  ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು 3ನೇ ಅಲೆಯ ಭೀತಿ ಎದುರಾಗಿದೆ.ಈ ಹಿನ್ನೆಲೆಯಲ್ಲಿ ಸರ್ಕಾರ ಸಂಪೂರ್ಣ ಲಾಕ್ ಡೌನ್ ಮಾಡುವ ಬಗ್ಗೆ ಚಿಂತನೆ ನಡೆಸಿದೆಯೇ ಎಂಬ ಪ್ರಶ್ನೆ ಮೂಡಿದ್ದು ಇದಕ್ಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಚಿಂತನೆ ಇಲ್ಲ.  ಸಂಪೂರ್ಣ ಲಾಕ್ ಡೌನ್ ವಿಚಾರವನ್ನೇ ಸರ್ಕಾರ ಮಾಡಿಲ್ಲ. ಲಾಕ್ ಡೌನ್ ಎಂಬುದು ಕಳೆದು ಹೋಗಿರುವ ನೀತಿ ಎಂದು ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಚಿವ ಡಾ.ಕೆ ಸುಧಾಕರ್,  ಕೊರೋನಾ ಪ್ರಕರಣ ಹೆಚ್ಚಳವಾಗುವುದನ್ನ ತಡೆಯಲಾಗಲ್ಲ ಆದರೆ ಕೋವಿಡ್ ನಿಯಂತ್ರಣ ಮಾಡಲು ಸಾಧ್ಯವಿದೆ. ಆಗ ಅನುಭವ ಇಲ್ಲದ ಹಿನ್ನೆಲೆ ಲಾಕ್ ಡೌನ್ ಮಾಡಲಾಗಿತ್ತು. ಆದರೆ  ಈಗ ೆರಡೂ ಅಲೆಯಿಂದ ಅನುಭವವಿದೆ. ಹೀಗಾಗಿ ಕೋವಿಡ್ ಹರಡದಂತೆ ತಡೆಯುತ್ತೇವೆ ಎಂದರು.

ಒಮಿಕ್ರಾನ್ ಪ್ರಾರಂಭದಲ್ಲಿ ಹೆಚ್ಚಿನ ಪರಿಣಾಮ ಬೀರಲ್ಲ. ಆದರೆ ಲಸಿಕೆ ಪಡೆಯದವರಿಗೆ ಹೆಚ್ಚು ಪರಿಣಾಮ ಬೀರುತ್ತೆ. ಲಸಿಕೆ ಪಡೆಯದಿದ್ದರೇ ಸಾವು ಕೂಡ ಸಂಭವಿಸಬಹುದು. ರಾಜ್ಯದಲ್ಲಿ ಶೇ.80 ರಷ್ಟು ಜನ 2ನೇ ಡೋಸ್ ಲಸಿಕೆ ಪಡೆದಿದ್ದಾರೆ  ಎಂದು ಸುಧಾಕರ್ ಮಾಹಿತಿ ನೀಡಿದರು.

Key words: Covid -Minister – Dr K Sudhakar – lockdown.