ಅತಿಥಿ ಉಪನ್ಯಾಸಕರ ಬೇಡಿಕೆ: ಒಂದೆರಡು ದಿನದಲ್ಲಿ ಸಿಹಿಸುದ್ದಿ.

ಬೆಂಗಳೂರು,ಜನವರಿ,12,2022(www.justkannada.in):  ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಾಕಷ್ಟು ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್ ಹೇಳಿದ್ದಾರೆ.

ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆಗಳನ್ನು ಕುರಿತು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಚೇರಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ತಮ್ಮ ನೇತೃತ್ವದಲ್ಲಿ ನಡೆದ ಮೂರು ತಾಸುಗಳ ಸಭೆಯ ನಂತರ ಅವರು ಈ ಭರವಸೆ ನೀಡಿದರು. ಸಭೆಯಲ್ಲಿ ಉಪನ್ಯಾಸಕರಿಗೆ ಸಂಬಂಧಿಸಿದ ನಾಲ್ಕೈದು ಸಂಘಗಳ ಪ್ರತಿನಿಧಿಗಳೂ ಭಾಗವಹಿಸಿದ್ದರು.

ಸಭೆಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ತಿನ ಹಲವು ಸದಸ್ಯರೊಂದಿಗೆ ವಿಷಯವನ್ನು ಕುರಿತು ಚರ್ಚಿಸಲಾಯಿತು. ಜೊತೆಗೆ ಅತಿಥಿ ಉಪನ್ಯಾಸಕರ ಸಂಘಗಳ ಪರವಾಗಿ ಸಲ್ಲಿಸಿದ ಅಹವಾಲುಗಳನ್ನು ಕೂಡ ಪರಿಶೀಲಿಸಲಾಯಿತು.

ನಂತರ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು. ಸಿಎಂ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆಯುತ್ತಿರುವ ಕಾರಣ ಒಂದೆರಡು ದಿನಗಳಲ್ಲಿ ಸೂಕ್ತ ತೀರ್ಮಾನ ಪ್ರಕಟಿಸಲಾಗುವುದು. ಅತಿಥಿ ಉಪನ್ಯಾಸಕರ ಸಮಸ್ಯೆ ಇತ್ಯರ್ಥದಲ್ಲಿ ಆರ್ಥಿಕ ಹೊರೆ ಮುಂತಾದ ಅಂಶಗಳಿವೆ. ಒಟ್ಟಿನಲ್ಲಿ ವಿಚಾರವನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಎಂಎಲ್ಸಿಗಳಾದ ಆಯನೂರು ಮಂಜುನಾಥ್, ಶಶಿಲ್ ನಮೋಶಿ, ಪುಟ್ಟಣ್ಣ, ಚಿದಾನಂದಗೌಡ, ಎಸ್.ವಿ.ಸುಂಕನೂರು, ಅರುಣ್ ಶಹಾಪುರ, ವೈ.ಎ. ನಾರಾಯಣಸ್ವಾಮಿ, ಕೆ.ಟಿ.ಶ್ರೀಕಂಠೇಗೌಡ, ಭೋಜೇಗೌಡ ಮತ್ತು ಹನುಮಂತ ನಿರಾಣಿ, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್ ಮತ್ತು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಉಪಸ್ಥಿತರಿದ್ದರು.

Key words: Demand -guest lecturers – goodnews-two days.

ENGLISH SUMMARY…

Guest lecturers demand: Good news probably within one or two days
Bengaluru, January 12, 2022 (www.justkannada.in): Higher Education Minister Dr. C.N. Ashwathnarayana today informed that, discussions have already been held with the Chief Minister regarding the problems faced by the 14,000 guest lecturers in the state, who are protesting and asked them to withdraw their protest immediately and get back to work.
A meeting was held to discuss the fulfillment of various demands and problems of the guest lecturers, with the Chairman of Legislative Council Basavaraj Horatti, at the Office of the Karnataka State Higher Education Council. Speaking to the press persons after the meeting Minister Dr. Ashwathnarayana told that representatives of several guest lecturers associations also had participated in the meeting. He informed that as the Chief Minister who is getting treatment for Corona, the final decision would be announced one or two days. “Solution to the problems of the guest lecturers involves financial matters, overall we are looking at this matter with sympathy,” he added.
MLCs Ayanur Manjunath, Shashil Namoshi, Puttanna, Chidanandagowda, S.V. Sunkanuru, Arun Shahpura, Y.V. Narayanaswamy, K.T. Srikantegowda, Bojegowda and Hanumantha Nirani, Higher Education Department Additional Chief Secretary Kumar Nayak and College Education Department Commissioner P. Pradeep were present in the meeting.
Keywords: Guest lecturers/ protest/ Higher Education Minister/ good news/ two days