ಬೆಂಗಳೂರು, ಜನವರಿ 16, 2022 (www.justkannada.in): ಹಿರಿಯ ಗಾಯಕಿ ಲತಾ ಮಂಗೇಶ್ಕರ್(92) ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರಿಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.
ಕೊರೊನಾ ಸೋಂಕಿಗೆ ತುತ್ತಾಗಿರುವ ಲತಾ ಮಂಗೇಶ್ಕರ್ ಅವರು ಇನ್ನೂ 8-10 ದಿನಗಳ ಕಾಲ ವೈದ್ಯರ ಪರಿಶೀಲನೆಯಲ್ಲೇ ಇರಲಿದ್ದಾರೆ. ಲತಾ ಅವರಿಗೆ ಈ ತಿಂಗಳ ಆರಂಭದಲ್ಲಿ ಕೆಲ ರೋಗಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
2019ರಲ್ಲಿ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಲತಾ ಅವರು 28 ದಿನಗಳ ಕಾಲ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು.