ಬೆಂಗಳೂರು,ಜನವರಿ,17,2022(www.justkannada.in): ರಾಜ್ಯದಲ್ಲಿ ಹರಡುತ್ತಿರುವ ಕೋವಿಡ್ ತಡೆಗಾಗಿ ವೀಕೆಂಡ್, ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ನಮಗೆ ಜನರ ಆರೋಗ್ಯ ಕಾಪಾಡುವುದು ಮುಖ್ಯ. ಹೀಗಾಗಿ ಯಾರೋ ಒಬ್ಬರ ಲಾಭಕ್ಕೆ ನಿಯಮ ಬದಲಾಯಿಸಲು ಆಗಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು.
ಮಾಧ್ಯಮಗಳ ಜತೆ ಇಂದು ಮಾತನಾಡಿದ ಸಚಿವ ಆರ್.ಅಶೋಕ್, ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ಸಭೆ ನಡೆಯಲಿದ್ದು, ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ ನಮಗೆ ಜನರ ಆರೋಗ್ಯ, ಪ್ರಾಣದ ರಕ್ಷಣೆ ಮುಖ್ಯವಾಗಿದೆ. ಹೀಗಾಗಿ ವೀಕೆಂಡ್ ಹಾಗೂ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಇದು ನಮ್ಮ ಕರ್ತವ್ಯ ಕೂಡ ಆಗಿದೆ. ಅದರ ಹೊರತಾಗಿ ಯಾರೋ ಒಬ್ಬರ ಲಾಭಕ್ಕಾಗಿ ನಿಯಮವನ್ನು ಬದಲಾಯಿಸಲು ಆಗಲ್ಲ ಎಂದರು.
ಇನ್ನು ಕಾಂಗ್ರೆಸ್ ಪಾದಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ. ಕೋವಿಡ್ ಟೆಸ್ಟ್ ಮಾಡಿಸಿಕೊಂಡಾಗ ಕೊರೋನಾ ಹರಡಿದೆಯೋ ಇಲ್ಲವೋ ಎಂಬ ವಿಷಯ ಗೊತ್ತಾಗುತ್ತದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದರು.
Key words: covid rule-no change- Minister -R. Ashok.