ಬೆಂಗಳೂರು,ಫೆಬ್ರವರಿ,5,2022(www.justkannada.in): ಹಿಜಾಬ್ ವಿವಾದ ರಾಷ್ಟ್ರಮಟ್ಟದಲ್ಲೇ ಸದ್ದು ಮಾಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ವಸ್ತ್ರ ಸಂಹಿತೆ ಪ್ರಕಾರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವಂತಿಲ್ಲ ಕಡ್ಡಾಯವಾಗಿ ಸಮವಸ್ತ್ರ ಧರಿಸಿ ಶಾಲಾ-ಕಾಲೇಜಿಗೆ ಬರಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಖಾಸಗಿ ಕಾಲೇಜುಗಳಲ್ಲಿ ಆಡಳಿತ ಮಂಡಳಿ ತೀರ್ಮಾನದಂತೆ ವಸ್ತ್ರಸಂಹಿತೆಯೇ ಜಾರಿಯಲ್ಲಿರುತ್ತದೆ ಎಂದು ಸರ್ಕಾರ ತಿಳಿಸಿದೆ. ಕರಾವಳಿಯಲ್ಲಿ ಶುರುವಾದ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಇದೀಗ ರಾಜ್ಯವಾಪಿ ಹರಡಿ ರಾಷ್ಟ್ರಾದ್ಯಂತ ಸುದ್ದಿಯಾಗಿದೆ.
Key words: hijab- Government -order