ಬೆಂಗಳೂರು, ಫೆಬ್ರವರಿ 08, 2022 (www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮಹತ್ವದ ಹೇಳಿಕೆ ನೀಡಿದ್ದಾರೆ.
ಇನ್ನೂ 3 ತಿಂಗಳು ಕಾಲ ಸಚಿವ ಸಂಪುಟ ವಿಸ್ತರಣೆ ನಡೆಯುವುದಿಲ್ಲ ಎಂದು ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ 3 ತಿಂಗಳು ಕಾಲ ಸಚಿವ ಸಂಪುಟ ವಿಸ್ತರಣೆ ನಡೆಯುವುದಿಲ್ಲ. ಪಂಚರಾಜ್ಯ ಚುನಾವಣೆ ಮುಗಿಯುವವರೆಗೂ ವಿಸ್ತರಣೆ ಇಲ್ಲ. ಈ ಬಗ್ಗೆ ಖುದ್ದು ಸಿಎಂ ಸ್ಪಷ್ಟನೆ ನೀಡಿದ್ದಾರೆ. ಇದನ್ನು ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಈ ಬಗ್ಗೆ ನನಗೆ ಯಾರು ಹೈ ಕಮಾಂಡ್ ನಾಯಕರು ಹೇಳಿಲ್ಲ. ಮಾಧ್ಯಮಗಳಲ್ಲಿ ಬಂದಿರುವದನ್ನು ಓದಿದ್ದೇನೆ. ಈ ವಿಚಾರದಲ್ಲಿ ಹೈ ಕಮಾಂಡ್ ತೀರ್ಮಾನಕ್ಕೆ ನಾನು ಬದ್ದ.
ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಇದನ್ನು ಹೈ ಕಮಾಂಡ್ ನಾಯಕರು ನಿರ್ಧರಿಸುತ್ತಾರೆ. ಸದ್ಯಕ್ಕೆ ಪಂಚರಾಜ್ಯ ಚುನಾವಣೆ ನಡೆಯುತ್ತಿದೆ. ಹೀಗಾಗಿ ಹೈಕಮಾಂಡ್ ನಾಯಕರ ಗಮನ ಚುನಾವಣೆಯತ್ತ ಇದೆ. ಹೀಗಾಗಿ ಸದ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಷಯ ಇಲ್ಲ ಎಂದಿದ್ದಾರೆ.