ಬೆಂಗಳೂರು, 16, 02, 2022 (www.justkannada.in): ಕೊರೋನಾ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಅವರು ವಿ.ವಿ.ಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ.
ಈ ಬಗ್ಗೆ ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, `ಕೆಲವು ವಿ.ವಿ.ಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದವು. ಆದರೆ, ಮೇಲೆ ಉಲ್ಲೇಖಿಸಿದ ಕಾರಣಗಳನ್ನು ನೀಡಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದರು. ಹೀಗಾಗಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನಿಸಿ, ಪರೀಕ್ಷೆಯನ್ನು ಮುಂದೂಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ’ ಎಂದು ತಿಳಿಸಿದ್ದಾರೆ.
ACS asks VCs to consider postpone exams by a month
Vice-Chancellors of universities have been asked by ACS, Department of Higher Education, to consider postponing the semester examinations of degree courses by one month.
G.Kumar Naik, ACS, Department of Higher Education, has stated in a press statement on wednesday, that he has asked the VCs to take decision regarding postponement of examinations since teaching of syllabi is yet to be competed.
The teaching could not be completed within the timeframe since classes had to closed in view of surge in CORONA 3rd wave and Omicron cases. Some of the universities had already announced schedule of semester examinations. But, The Commissioner, DCTE, had written a letter asking to postpone the examinations by a month in order to facilate students better prepare, he has told.