ಬೆಂಗಳೂರು, ಫೆಬ್ರವರಿ 20, 2022 (www.justkannaa.in): ಅರುಣಾಚಲ ಪ್ರದೇಶ, ಮಿಜೋರಾಂ ರಾಜ್ಯ ರಚನಾ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.
ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ರಚನಾ ದಿನದ ಅಂಗವಾಗಿ ಅಲ್ಲಿನ ಜನರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಶುಭಾಶಯ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, ‘ಅರುಣಾಚಲ ಪ್ರದೇಶದ ಜನರಿಗೆ ಅವರ ರಾಜ್ಯ ರಚನೆಯಾದ ದಿನದ ಶುಭಾಶಯಗಳು ಎಂದು ಹೇಳಿದ್ದಾರೆ.