ಕಲಬುರಗಿ,ಮಾರ್ಚ್,8,2022(www.justkannada.in): ಹಿಜಾಬ್ ತಂಟೆಗೆ ಬಂದರೆ ತುಂಡು ತುಂಡು ಮಾಡುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಕ್ರಂಖಾನ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಆಗಿದ್ದು, ಹಿಜಾಬ್ ವಿವಾರದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದ್ದ ವೇಳೆ ಮುಕ್ರಂ ಖಾನ್ ವಿವಾದಾತ್ಮಕ ಮತ್ತು ಬೆದರಿಕೆಯ ಹೇಳಿಕೆ ನೀಡಿದ್ದರು.
ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ತಲೆಮರೆಸಿಕೊಂಡಿದ್ದ ಮುಕ್ರಂ ಖಾನ್ರನ್ನು ಪೊಲೀಸರು ಹೈದರಾಬಾದ್ನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Key words: hijab-congress-leader-arrest