ಬೆಂಗಳೂರು,ಮಾರ್ಚ್,18,2022(www.justkannada.in): ರಾಜ್ಯದ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷವಿದ್ದು ಈ ಮಧ್ಯೆ ಸಚಿವ ಸಂಪುಟ ವಿಸ್ತರಣೆಗಾಗಿ ಸಚಿವಾಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರದ ವರಿಷ್ಠರ ಜತೆ ಚರ್ವೆ ನಡೆಸಲಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 1 ರಂದು ಅಧಿಕೃತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅಮಿತ್ ಶಾ ಅವರ ಜತೆ ಚರ್ಚಿಸುವ ಸಾಧ್ಯತೆ ಇದೆ.
ಕಳೆದ ಮೂರ್ನಾಲ್ಕು ತಿಂಗಳ ಹಿಂದೆಯೇ ಸಚಿವಾಕಾಂಕ್ಷಿಗಳು ಸಂಪುಟ ವಿಸ್ತರಣೆಗೆ ಆಗ್ರಹಿಸಿದ್ದರು. ಆದರೆ ಪಂಚರಾಜ್ಯ ಚುನಾವಣೆ ಎದುರಾದ ಹಿನ್ನೆಲೆ ಸಂಪುಟ ವಿಸ್ತರಣೆ ವಿಚಾರಕ್ಕೆ ಬ್ರೇಕ್ ಬಿದ್ದಿತ್ತು. ಅಲ್ಲದೆ ಪಂಚರಾಜ್ಯ ಚುನಾವಣೆ ಬಳಿಕ ಈ ಬಗ್ಗೆ ಚರ್ಚಿಸೋಣ ಎಂದು ಅಮಿತ್ ಶಾ ಸಿಎಂ ಬೊಮ್ಮಾಯಿಗೆ ಹೇಳಿದ್ದರು ಎನ್ನಲಾಗಿದೆ. ಇದೀಗ ಏಪ್ರಿಲ್ 1 ರಂದು ಅಮಿತ್ ರಾಜ್ಯಕ್ಕೆ ಆಗಮಿಸಲಿದ್ದು ಈ ವೇಳೆ ಸಂಪುಟ ವಿಸ್ತರಣೆ ಚರ್ಚೆಗೆ ಬರುತ್ತಾ ಕಾದು ನೋಡಬೇಕಿದೆ.
Key words: amith sha- cabinet- Extension