ಬೆಂಗಳೂರು,ಆ,5,2019(www.justkannada.in): ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಿದ ಕೇಂದ್ರದದ ಕ್ರಮವನ್ನು ಸಿಎಂ ಬಿಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಯಡಿಯೂರಪ್ಪ , ಸ್ವಾತಂತ್ರ್ಯ ನಂತರ ಪ್ರಧಾನಿ ಮೋದಿ ಒಂದು ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ. ಇದನ್ನು ಭಾರತದ ಪ್ರತಿಯೊಬ್ಬ ಪ್ರಜೆಯೂ ಸ್ವಾಗತ ಮಾಡ್ತಾನೆ. ಏಕ್ ದೇಶ್ ಮೇ ದೋ ಪ್ರಧಾನ್, ದೋ ವಿಧಾನ್ ದೋ ನಿಶಾನ್ ನಹಿ ಚಲೆಲೇಗಾ, ನಹಿ ಚಲೇಗಾ ಎಂದು ಹೋರಾಟ ಮಾಡಿ ಶ್ಯಾಮ್ ಪ್ರಸಾದ್ ಮುಖರ್ಜಿ ಹುತಾತ್ಮರಾದ್ರು. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಆತ್ಮಕ್ಕೆ ಇಂದು ಶಾಂತಿ ಸಿಕ್ಕಿದೆ. ಇದಕ್ಕಾಗಿ ಮತ್ತೊಮ್ಮೆ ನಾನು ಕೇಂದ್ರ ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದರು.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆಗೆ ತೆರಳಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಇದೀಗ ವೈಮಾನಿಕ ಸಮೀಕ್ಷೆ ನಡೆಸಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಸಂಜೆ 7 ಗಂಟೆಗೆ ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದು, ರಾಜ್ಯದ ಸಂಸದರ ಜೊತೆಗಿನ ಸಭೆ, ವಿವಿಧ ಕೇಂದ್ರ ಹಾಗೂ ಪ್ರಧಾನಿಗಳ ಭೇಟಿ ಹಾಗೂ ಸಚಿವ ಸಂಪುಟ ರಚನೆ ಕುರಿತು ಚರ್ಚಿಸಲಿದ್ದಾರೆ.
Key words: CM BS Yeddyurappa -welcomed -Center’s -decision – repeal -Article 370