ಬೆಂಗಳೂರು,ಮಾರ್ಚ್,24,2022(www.justkannada.in): ಮಾರ್ಚ್ 28ರಿಂದ ಎಸ್.ಎಸ್ ಎಲ್ ಸಿ ಪರೀಕ್ಷೆ ಶುರುವಾಗಲಿದ್ದು, ಪರೀಕ್ಷೆಗೆ ಹಿಜಾಬ್ ಧರಿಸಿ ಬಂದರೆ ಅನುಮತಿ ನೀಡಲಾಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಿ.ಸಿ ನಾಗೇಶ್, ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಹಿಜಾಬ್ ಧರಿಸಿ ಪರೀಕ್ಷೆಗೆ ಬಂದರೇ ಅನುಮತಿ ನೀಡಲಾಗುವುದಿಲ್ಲ. ಹೀಗಾಗಿ ಯಾರೂ ಸಹ ಹಿಜಾಬ್ ಧರಿಸಿ ಪರೀಕ್ಷೆಗೆ ಬರಬೇಡಿ ಎಂದು ಮನವಿ ಮಾಡಿದರು.
ಎಸ್ಎಸ್ಎಲ್ಸಿ ಪರೀಕ್ಷೆಗೆ ಕೌಂಟ್ ಡೌನ್ ಪ್ರಾರಂಭವಾಗಿದ್ದು, ಮಾರ್ಚ್ 28ರ ಸೋಮವಾರದಿಂದ ರಾಜ್ಯಾದ್ಯಂತ ಪರೀಕ್ಷೆ ಆರಂಭವಾಗಲಿದೆ. ಈ ಬಾರಿ 8,73,846 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದ 15,387 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದು, ಪರೀಕ್ಷೆ ಬರೆಯಲು 45,289 ಪರೀಕ್ಷಾ ಕೊಠಡಿಗಳ ಸಿದ್ಧತೆ ಮಾಡಲಾಗಿದೆ. 3,444 ಮುಖ್ಯ ಅಧೀಕ್ಷಕರ ನೇತೃತ್ವದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದ್ದು, 49,817 ಕೊಠಡಿ ಮೇಲ್ವಿಚಾರಕರು ಭಾಗಿಯಾಗಲಿದ್ದಾರೆ.
Key words: SSLC-Exam- hijab -not allowed- Minister-BC Nagesh.