ಬೆಂಗಳೂರು: ಮಾರ್ಚ್,24,2022(www.justkannada.in): ಸಕ್ಕರೆ & ಜವಳಿ ಹಾಗೂ ಕೈಮಗ್ಗ ಅಭಿವೃದ್ಧಿ ಸಚಿವ ಶಂಕರ ಪಾಟೀಲ ಬ ಮುನೇನಕೊಪ್ಪ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿಂದು ಮಂಡ್ಯ ಮೈ ಶುಗರ್ ಸಕ್ಕರೆ ಕಾರ್ಖಾನೆ ಪುನಾರಂಭ ಸಂಬಂಧ ಸರ್ಕಾರ ಈವರೆಗೆ ಕೈಗೊಂಡ ಕ್ರಮಗಳ ಸ್ಥಿತಿಗತಿಗಳ ಅವಲೋಕನ ಸಭೆಯನ್ನು ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಲಾಯಿತು.
ಸಭೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಸಚಿವ ನಾರಾಯಣ ಗೌಡ, ಶಾಸಕರಾದ ಪುಟ್ಟರಾಜು, ಸುರೇಶ್ ಗೌಡ, ದಿನೇಶ್ ಗೂಳಿಗೌಡ, ಶ್ರೀಕಂಠಯ್ಯ, ಕೈಗಾರಿಕಾ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಮೈ ಶುಗರ್ ಕಾರ್ಖಾನೆ ಅಧ್ಯಕ್ಷರು, ಮಂಡ್ಯ ಜಿಲ್ಲಾಧಿಕಾರಿ, ಸಕ್ಕರೆ ಇಲಾಖೆಯ ಆಯುಕ್ತರು, ಮೈಶುಗರ್ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಇತರೆ ಅಧಿಕಾರಿ ವರ್ಗದವರು ಸಭೆಯಲ್ಲಿ ಭಾಗವಹಿಸಿದ್ದರು.
Key words: Minister- Sankara Patil Muneenkoppa – meeting – reopening – Sugar Factory