ಮೈಸೂರು,ಮಾರ್ಚ್,27,2022(www.justkannada.in): ನಾಳೆಯಿಂದ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಹಿನ್ನಲೆ, ಮೈಸೂರಿನ ಪರೀಕ್ಷಾ ಕೇಂದ್ರಗಳ ಸುತ್ತ 144 ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ದಿನಗಳಂದು ಬೆಳಿಗ್ಗೆ .6ರಿಂದ ಸಂಜೆ.6ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ಮಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮೈಸೂರು ನಗರದಲ್ಲಿ 57 ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 149 ಪರೀಕ್ಷಾ ಕೇಂದ್ರಗಳನ್ನ ಸ್ಥಾಪನೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು, ಸಿಬ್ಬಂದಿ ಹೊರತುಪಡಿಸಿ ಉಳಿದವರಿಗೆ ಪ್ರವೇಶವಿಲ್ಲ. ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಸೂಚನೆ ನೀಡಲಾಗಿದೆ.
Key words: SSLC-Exam – Section 144 -enforcement -Mysore.