ಬೆಂಗಳೂರು,ಆ,7,2019(www.justkannada.in): ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಉತ್ತರ ಕರ್ನಾಟಕ ಸೇರಿ ಹಲವು ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಪ್ರವಾಸ ಮೊಟಕುಗೊಳಿಸಿ ನೆರೆ ವೀಕ್ಷಣೆಗೆ ಆಗಮಿಸುತ್ತಿದ್ದಾರೆ.
ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲು ಹೈಕಮಾಂಡ್ ಸೂಚಿಸಿದ ಹಿನ್ನಲೆಯಲ್ಲಿ ಸಂಪುಟ ವಿಸ್ತರಣೆಯ ಲೀಸ್ಟ್ ಗೆ ಹೈ ಕಮಾಂಡ್ ಗ್ರೀನ್ ಸಿಗ್ನಲ್ ಸಿಗದೇ, ಸಿಎಂ ಬಿಎಸ್ ಯಡಿಯೂರಪ್ಪ ವಾಪಾಸ್ ಆಗುತ್ತಿದ್ದಾರೆ. ಹೀಗಾಗಿ ಸಚಿವ ಸಂಪುಟ ರಚನೆ ಮತ್ತೆ ಮುಂದಕ್ಕೆ ಹೋಗಿದೆ.
ಈ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ಅಮಿತ್ ಶಾ ದೂರವಾಣಿ ಕರೆಮಾಡಿದ್ರು. ಕೂಡಲೇ ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಿ ಎಂದಿದ್ದಾರೆ. ಬಳಿಕ ದೆಹಲಿಗೆ ಆಗಮಿಸಲು ಹೇಳಿದ್ದಾರೆ. ಹೀಗಾಗಿ ಎರಡು ದಿನಗಳ ಪ್ರವಾಹ ಪೀಡಿತ ಪ್ರದೇಶ ವೀಕ್ಷಣೆ ಮಾಡಲಿದ್ದೇನೆ. ನಂತರ ದೆಹಲಿಗೆ ತೆರಳಲಿದ್ದೇನೆ ಎಂದು ತಿಳಿಸಿದ್ದಾರೆ.
ಇಂದು ಬೆಂಗಳೂರಿಗೆ ಆಗಮಿಸಲಿರುವ ಸಿಎಂ ಬಿಎಸ್ ಯಡಿಯೂರಪ್ಪ ನೆರೆ ಪ್ರದೇಶಗಳ ತುರ್ತು ಪರಿಹಾರ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ವಿವರಣೆ ಪಡೆಯಲಿದ್ದಾರೆ. ನಂತರ ಬೆಂಗಳೂರಿನಿಂದ ನೇರವಾಗಿ ಬೆಳಗಾವಿಗೆ ತೆರಳಲಿರುವ ಯಡಿಯೂರಪ್ಪ ಬೆಳಗಾವಿ ಮತ್ತಿತರ ಕಡೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
key words: Cabinet- formation -not – CM BS Yeddyurappa- neighboring areas.